ಪಿಎಸ್ಐ ಪರೀಕ್ಷೆಯಲ್ಲಿ ನಡೆದ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ. ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಮೂಲಕ ಯಾರೆಲ್ಲ ರಾಜಕಾರಣಿಗಳು ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬುದು ತಿಳಿದು ಬರಲಿದೆ. ಉಪ್ಪು ತಿಂದವರು ನೀರು ಕುಡಿಯಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ. “ಉಪ್ಪು ತಿಂದವರು ನೀರು ಕುಡಿಯಲಿ”.
ಪಿಎಸ್ಐ ನೇಮಕಾತಿ ‘ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು & ಅಮ್ರಿತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು ರಾಜ್ಯ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.