ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನ ಒಳ್ಳೆಯದಲ್ಲ. ಶಾಲಾ- ಕಾಲೇಜುಗಳಲ್ಲಿ ಜಾತಿ ಮತ ಇರುವುದಿಲ್ಲ. ಎಲ್ಲರೂ ಒಂದೇ. ನಾವೆಲ್ಲರೂ ಭಾರತೀಯರು. ಭಾರತೀಯತೆ ನಮ್ಮದಾಗಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಬೆಂಗಳೂರಿನ ಸರ್ಜಾಪುರದ ಖಾಸಗಿ ಶಾಲಾ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ.
ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನ ಒಳ್ಳೆಯದಲ್ಲ. ಶಾಲಾ- ಕಾಲೇಜುಗಳಲ್ಲಿ ಜಾತಿ ಮತ ಇರುವುದಿಲ್ಲ. ಎಲ್ಲರೂ ಒಂದೇ. ನಾವೆಲ್ಲರೂ ಭಾರತೀಯರು. ಶಾಲಾ ಕಾಲೇಜಿನಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ನಡೆಸಬೇಕು. ಪರಿಸರ ಕಾಳಜಿ, ಹವಾಮಾನ ವಿಚಾರದಲ್ಲಿ ಜಾಗೃತಿ ಮೂಡಿಸಬೇಕು. ಇಡೀ ದೇಶದ ಶೈಕ್ಷಣಿಕ ಸಂಸ್ಥೆಗಳನ್ನು ಅಳವಡಿಸಬೇಕು. ಶಾಲಾ- ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಧರ್ಮದ ಬಗ್ಗೆ ತಿಳಿಸಬೇಕು. ಎಲ್ಲಾ ಭಾಷೆಯನ್ನು ಕಲಿಯಬೇಕು, ಮಾತೃ ಭಾಷೆ ಮರೆಯಬಾರದು ಎಂದು ಹೇಳಿಕೆ ನೀಡಿದ್ದಾರೆ.
ಶಾಲೆಗಳು ಮಾಡಿರುವ ಕ್ರಮವನ್ನು ವಿದ್ಯಾರ್ಥಿ ಅಳವಡಿಸಕೊಳ್ಳಬೇಕು. ಇರುವೆಗಳಿಗೆ ಸಕ್ಕರೆ ಹಾಕಿ, ಹಾವಿಗೆ ಹಾಲೆರದು, ಪಶುಗಳಿಗೆ ಮೇವು ಹಾಕಿ, ತಿಲಕವಿಟ್ಟು ಗೌರವಿಸುವ ಸಂಸ್ಕಾರ ನಮ್ಮದು. ಎಲ್ಲಾ ಭಾಷೆಯನ್ನು ಕಲಿಯಬೇಕು ಆದರೆ ಮೊದಲು ನಿಮ್ಮ ಮಾತೃ ಭಾಷೆ ಕಲೀರಿ. ಮೊದಲು ಕನ್ನಡ ಕಲೀರಿ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಮಾತೃ ಭಾಷೆ ಕಣ್ಣು ಇದ್ದಂತೆ. ಇತರೆ ಭಾಷೆ ಕನ್ನಡಕ ಇದ್ದಂತೆ. ಕಣ್ಣೆ ಇಲ್ಲದಿದ್ದರೆ ರಿಬಾನ್ ಗ್ಲಾಸ್ ಹಾಕಿದ್ರೂ ಪ್ರಯೋಜನ ಇರಲ್ಲ ಎಂದು ಖಾಸಗಿ ಶಾಲೆ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿಕೆ ನೀಡಿದ್ದಾರೆ.