ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಗ್ರಾಮೀಣ ಪ್ರದೇಶಗಳ ಮಕ್ಕಳ ಶಿಕ್ಷಣಕ್ಕೆ ತೊಡಕಾಗಿರುವುದನ್ನು ಗಮನಿಸಿರುವ ಕೇಂದ್ರ ಸರ್ಕಾರ, ಆಯಾ ಭಾಷೆಯಲ್ಲಿಯೇ ‘ಒನ್ ಕ್ಲಾಸ್ ಒನ್ ಟಿವಿ’ ಆರಂಭಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಸಂಸತ್ತಿನಲ್ಲಿ 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ ನಿರ್ಮಲಾ ಸೀತಾರಾಮನ್ ಅವರು, ಕೊರೋನಾ ಕಾರಣದಿಂದ ಶಾಲೆಗಳು ಬಂದ್ ಆಗಿವೆ. ಹೀಗಾಗಿ 1ರಿಂದ 12ನೇ ತರಗತಿ ಮಕ್ಕಳಿಗೆ ಚಾನಲ್ ಮಾಡಲಾಗುವುದು. ಒನ್ ಕ್ಲಾಸ್ ಒನ್ ಟಿವಿ ಚಾನಲ್ ಮಾಡಲಾಗುವುದು ಎಂದು ಹೇಳಿದರು. ಹಾಗೆಯೇ ಆನ್ಲೈನ್ ಶಿಕ್ಷಣ ಇದೀಗ ಹೆಚ್ಚು ಪ್ರಚಲಿತವಾಗಿರುವುದರಿಂದ ಒಂದು ಆನ್ಲೈನ್ ವಿಶ್ವವಿದ್ಯಾಲಯದ ಆರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.
ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಒನ್ ಕ್ಲಾಸ್ ಒನ್ ಟಿವಿ ಚಾನೆಲ್ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಪ್ರಧಾನಿ ‘ಇ-ವಿದ್ಯಾ’ ಯೋಜನೆ ಅಡಿಯಲ್ಲಿ 200 ಚಾನೆಲ್ಗಳು ಅಸ್ತಿತ್ವಕ್ಕೆ ಬರಲಿವೆ ಎಂದು ತಿಳಿಸಿದರು. ಇದೇ ವೇಳೆ 2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಹೇಳಿದರು.