ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ಜಾರಿ ಮಾಡಿದ್ದ ನೈಟ್ ಕರ್ಪ್ಯೂ ಹಾಗೂ ಇತರೆ ನಿರ್ಬಂಧಗಳನ್ನು ಸಡಿಲಿಸುವ ಮೂಲಕ ರಾಜ್ಯ ಸರ್ಕಾರ ಇಂದು ಶನಿವಾರ ಗುಡ್ ನ್ಯೂಸ್ ನೀಡಿದೆ.
ಬೆಂಗಳೂರಿನಲ್ಲಿ ಶಾಲೆ-ಕಾಲೇಜುಗಳ ಆರಂಭಕ್ಕೆ ವಿಧಿಸಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಇಂದು ಹಿಂಪಡೆದಿದೆ.
ಮುಖ್ಯಮಂತ್ರಿ ಬಿ.ಎಸ್.ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಜನತೆಗೆ ರಿಲೀಪ್ ನೀಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಫೆಬ್ರವರಿ ಆರಂಭದಿಂದ ಬೆಂಗಳೂರಿನಲ್ಲಿ ಶಾಲೆ-ಕಾಲೇಜುಗಳು ಆರಂಭವಾಗಲಿವೆ ಎಂದು ಹೇಳಿದ್ದಾರೆ.
ಈ ಹಿಂದೆ ಬೆಂಗಳೂರಿನಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನವರಿ 31 ರ ವರೆಗೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.