ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಬೆಳಗಾವಿಯ ವಿಜಯ್ ಪ್ಯಾರಾಮೆಡಿಕಲ್ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ವಿಜಯ್ ಪ್ಯಾರಾಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ.ಪ್ರಕಾಶ್ ಪಾಟೀಲ್ ಮಾತನಾಡಿದ್ದು, ಮುಂದಿನ ಆದೇಶವರೆಗೂ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಎಷ್ಟು ದಿನ ರಜೆ ನೀಡಬೇಕು ಎಂಬುದನ್ನು ಬಗ್ಗೆ ಡಿಸಿ ಜೊತೆ ಚರ್ಚೆ ನಡೆಸುವೆ. ಯಾವ ವಿದ್ಯಾರ್ಥಿಗೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಇನ್ನು ಕಾಲೇಜು ಮರಳಿ ಪ್ರಾರಂಭವಾದ ಬಳಿಕ ಹೆಚ್ಚಿನ ಕ್ಲಾಸ್ ತಗೆದುಕೊಳ್ಳುತ್ತೇವೆ. ಯಾವುದೇ ಮಕ್ಕಳಿಗೆ ತೊಂದರೆಯಾಗಬಾರದೆಂದು ರಜೆ ಘೋಷಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.