ಯೂತ್ ಕಾಂಗ್ರೆಸ್ ಅಧ್ಯಕ್ಷ ಹ್ಯಾರಿಸ್ ನಲಪಾಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಕೆ ಹಿನ್ನಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ನಲಪಾಡ್ ವಿರುದ್ಧ ಎರಡು ದೂರು ದಾಖಲಾಗಿದೆ.
ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕೆ ನಲಪಾಡ್ ಹಾಗೂ ತಂಡದವರು ಟೌನ್ ಹಾಲ್ ಮುಂಭಾಗ ಹಾಗೂ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಅನಧಿಕೃತ ಫ್ಲೆಕ್ಸ್ ಅಳವಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಮೊದಲು ದೂರು ದಾಖಲಿಸಿದ್ದು, ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚಂದ್ರಕಾಂತ್ ಎರಡನೇ ದೂರು ದಾಖಲಿಸಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡ ಹಲಸೂರು ಗೇಟ್ ಪೊಲೀಸರಿಂದ ಪ್ರಕರಣದ ತನಿಖೆ ನಡೆಸುತ್ತಿದ್ದು, ನಲಪಾಡ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.