ಪಂಜಾಬ್ನ ಅಮೃತಸರದಲ್ಲಿನ ಗಡಿ ಭದ್ರತಾ ಪಡೆ (ಬಿಎಸ್ಎಫ್) ಕ್ಯಾಂಟೀನ್ನಲ್ಲಿ ಯೋಧನೊಬ್ಬ, ತನ್ನ ಪಕ್ಕದ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಇದರಿಂದಾಗಿ 5 ಜನ ಯೋಧರು ಸಾವನ್ನಪ್ಪಿದ್ದು, 10 ಜನ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತನ್ನ ಕರ್ತವ್ಯದಿಂದ ಅಸಮಾಧಾನಗೊಂಡಿದ್ದ ಯೋಧ ತನ್ನ ಸಹೋದ್ಐಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.
ಗಾಯಾಳು ಯೋಧರನ್ನು ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಅಲ್ಲದೇ, ಈ ಕುರಿತು ನ್ಯಾಯಾಲಯದಿಂದ ತನಿಖೆಗೆ ಆದೇಶಿಸಲಾಗಿದೆ ಎಂದು ಬಿಎಸ್ಎಫ್ ಹೇಳಿದೆ.