ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ. ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಕೆಲವು ಅಡಚಣೆಯಿಂದ ವಿದ್ಯುತ್ ಸಮಸ್ಯೆ ಆಗಿರಬಹುದು. ಕಲ್ಲಿದ್ದಲು ಕೊರತೆಯಿಂದ ಯೂನಿಟ್ ಸ್ಥಗಿತ ಮಾಡಿಲ್ಲ. ಸರಬರಾಜಿನ ವ್ಯತ್ಯಾಸದಲ್ಲಿ ತೊಂದರೆ ಆಗಿರಬಹುದು. ಆದರೆ ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಸಮಸ್ಯೆ ಆಗಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ. ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಇಲ್ಲ – ಶ್ರೀ @karkalasunil, ಇಂಧನ ಸಚಿವರು pic.twitter.com/ykoOAIP5wH
— BJP Karnataka (@BJP4Karnataka) April 20, 2022
ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಅಭಾವದ ಕುರಿತು ಇಂದು ಇಂಧನ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ನವರು ಕಲ್ಲಿದ್ದಲು ಕೊರತೆ ಬಗ್ಗೆ ಮಾತಾಡುತ್ತಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಇಲ್ಲ, ಕಾಂಗ್ರೆಸ್ ಅನಗತ್ಯವಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಸಚಿವರು ಹೇಳಿದರು.