ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತರ ಹರ್ಷ ನಿವಾಸಕ್ಕೆ ಇಂದು ಸಚಿವ ಕೆ.ಎಸ್.ಈಶ್ವರಪ್ಪ ಪತ್ನಿ ಜಯಲಕ್ಷ್ಮೀ ಹಾಗೂ ಪುತ್ರ ಕೆ.ಇ.ಕಾಂತೇಶ್ ಭೇಟಿ ನೀಡಿದ್ದಾರೆ.
ಈಶ್ವರಪ್ಪ ಪತ್ನಿ ಜಯಲಕ್ಷ್ಮೀ ಹರ್ಷ ಕುಟುಂಬದವರಿಗೆ ಸಾಂತ್ವನ ಹೇಳಿದ್ದು, ಹತ್ತು ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ಹೇಳಿದ್ದಾರೆ.
ಇನ್ನು, ಇಂದು ಹರ್ಷ ನಿವಾಸಕ್ಕೆ ಮುರುಘಾಮಠದ ಡಾ. ಶಿವಮೂರ್ತಿ ಮುರುಘ ಶರಣ ಶ್ರೀಗಳ ನೇತೃತ್ವದಲ್ಲಿ, ಹತ್ತಾರು ಸ್ವಾಮೀಜಿಗಳು ಹಾಗೂ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ್ದಾರೆ.