ನಟ ಧನ್ವೀರ್ ನಟನೆಯ ‘ಬೈ ಟೂ ಲವ್’ ಸಿನಿಮಾ ಇಂದು ಫೆ.18 ಶುಕ್ರವಾರದಂದು ತೆರೆಗೆ ಬಂದಿದೆ. ಈ ಬೆನ್ನಲ್ಲೇ, ನಟ ಧನ್ವೀರ್ ಅವರು ಅಭಿಮಾನಿಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ.
ನಟ ಧನ್ವೀರ್ ಬೌನ್ಸರ್ ಜತೆ ಸೇರಿ ಅಭಿಮಾನಿ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದ್ದು, ಹಲ್ಲೆಗೆ ಒಳಗಾದ ಅಭಿಮಾನಿ ದೂರು ದಾಖಲು ಮಾಡಿದ್ದಾರೆ. ಈ ಘಟನೆ ಬಗ್ಗೆ ಧನ್ವೀರ್ ಅವರಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
ಬೆಂಗಳೂರಿನ ಎಸ್.ಸಿ. ರಸ್ತೆಯ ಅನುಪಮಾ ಥಿಯೇಟರ್ ಬಳಿ ಗುರುವಾರ (ಫೆ.17) ತಡರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ. ನಟ ಧನ್ವೀರ್ ವಿರುದ್ಧ ಚಂದ್ರಶೇಖರ್ ಎಂಬ ಯುವಕ ಥಳಿಸಿರುವ ಆರೋಪ ಮಾಡಿದ್ದಾರೆ. ಸ್ನೇಹಿತನ ಜೊತೆ ಊಟ ಮುಗಿಸಿ ಚಂದ್ರಶೇಖರ್ ಮನೆಗೆ ತೆರಳುತ್ತಿದ್ದರು. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಕಂಡಾಗ ಫೋಟೋ ತೆಗೆಸಿಕೊಳ್ಳಲು ಅಭಿಮಾನಿಗಳು ಮುಂದಾಗುತ್ತಾರೆ. ಅದೇ ರೀತಿ ಧನ್ವೀರ್ ಕಂಡಾಗ ಫೋಟೋ ತೆಗೆಸಿಕೊಳ್ಳೋಕೆ ಚಂದ್ರಶೇಖರ್ ಮುಂದಾಗಿದ್ದಾರೆ. ಅಭಿಮಾನಿಯ ಬೇಡಿಕೆಗೆ ಧನ್ವೀರ್ ಸ್ಪಂದಿಸಲಿಲ್ಲ.
ಇದು ಚಂದ್ರಶೇಖರ್ಗೆ ಬೇಸರ ತರಿಸಿದೆ. ಆಗ ಚಂದ್ರಶೇಖರ್ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಧನ್ವೀರ್ ಹಲ್ಲೆ ಮಾಡಿದ್ದಾರೆ ಎಂದು ಚಂದ್ರಶೇಖರ್ ಆರೋಪಿಸಿದ್ದಾರೆ. ಈ ವೇಳೆ ಧನ್ವೀರ್ ಜತೆಯಿದ್ದ ಬೌನ್ಸರ್ಸ್ ಕೂಡ ಹಲ್ಲೆ ಮಾಡಿದ್ದಾರೆ ಎಂದು ದೂರು ಸಲ್ಲಿಸಲಾಗಿದೆ.
ಹಲ್ಲೆಗೊಳಗಾದ ಚಂದ್ರಶೇಖರ್ ಉಪ್ಪಾರಪೇಟೆ ಠಾಣೆಗೆ ದೂರು ನೀಡಿದ್ದು, ಇವರ ದೇಹದ ಮೇಲೆ ಹಲ್ಲೆಯಾಘಿರುವ ಗುರುತುಗಳಿವೆ. ನಟ ಧನ್ವೀರ್ ಹಾಗೂ ಶ್ರೀಲೀಲಾ ಜಪತೆಯಘಾಇ ನಟಿಸಿರುವ ಬೈ ಟೂ ಲವ್ ಚಿತ್ರ ಇಂದು ಬಿಡುಗಡೆಯಾಗಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.