ಕೆಲ ತಿಂಗಳುಗಳ ಹಿಂದೆಯಷ್ಟೇ ಪತಿ ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡಿದ್ದ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಮತ್ತೊಂದು ಸಂಕಷ್ಠ ಎದುರಾಗಿದೆ.ಪತಿಯ ಸಾವಿನಿಂದ ಹೊರಬರುವ ಮುನ್ನವೇ ಅವರ ತಂದೆ ಭಾಗಮನೆ ರೇವನಾಥ್ ಇಂದು ನಿಧನರಾಗಿದ್ದಾರೆ.
ಭಾಗಮನೆ ರೇವನಾಥ್ ಅವರಿಗೆ ಹೃದಯಾಘಾತ ಕಾಣಿಸಿಕೊಂಡ ತಕ್ಷಣವೇ ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಭಾನುವಾರ ಸಾವನ್ನಪ್ಪಿದ್ದಾರೆ.
ಮೂಲತಃ ಚಿಕ್ಕಮಗಳೂರಿನವರಾದ ರೇವನಾಥ್ ಅವರು ಎನ್ಎಚ್ಎಐನಲ್ಲಿ ಮುಖ್ಯ ಎಂಜಿನಿಯರ್ ಆಗಿದ್ದರು. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ 20 ವರ್ಷಗಳ ಹಿಂದೆ ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಪುನೀತ್ ರಾಜ್ಕುಮಾರ್ ಅವರ ನಿಧನದ ನಂತರ ರೇವನಾಥ್ ಅವರು ತುಂಬ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.
ನಟ ಪುನೀತ್ ರಾಜ್ಕುಮಾರ್ ಅವರು ಅಕ್ಟೋಬರ್ 29 ರಂದು ಹೃದಯಾಘಾತದಿಂದ ನಿಧನರಾಗಿದ್ದರು.