ದೆಹಲಿ-ಮೀರತ್ ಎಕ್ಸ್ಪ್ರೆಸ್ವೇದಲ್ಲಿ ಛಜರ್ಸಿ ಟೋಲ್ ಪ್ಲಾಜಾ ಬಳಿ ತನ್ನ ವಾಹನದ ಮೇಲೆ ಕನಿಷ್ಠ 3-4 ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಗುರುವಾರ ಆರೋಪಿಸಿದ್ದಾರೆ.
ಎಐಎಂಐಎಂ ಮುಖ್ಯಸ್ಥರು ಉತ್ತರಪ್ರದೇಶದ ಮೀರತ್ನ ಕಿಥೌರ್ನಲ್ಲಿ ಚುನಾವಣಾ ಸಂಬಂಧಿತ ಕಾರ್ಯಕ್ರಮದ ನಂತರ ದೆಹಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
कुछ देर पहले छिजारसी टोल गेट पर मेरी गाड़ी पर गोलियाँ चलाई गयी। 4 राउंड फ़ायर हुए। 3-4 लोग थे, सब के सब भाग गए और हथियार वहीं छोड़ गए। मेरी गाड़ी पंक्चर हो गयी, लेकिन मैं दूसरी गाड़ी में बैठ कर वहाँ से निकल गया। हम सब महफ़ूज़ हैं। अलहमदु’लिलाह। pic.twitter.com/Q55qJbYRih
— Asaduddin Owaisi (@asadowaisi) February 3, 2022
ಮೀರತ್ನ ಕಿಥೌರ್ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ ಇಬ್ಬರು ನನ್ನ ವಾಹನದ ಮೇಲೆ ಸುಮಾರು ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದರು, ಅವರು ಒಟ್ಟು ಮೂರರಿಂದ ನಾಲ್ಕು ಜನರಿದ್ದರು. ನನ್ನ ವಾಹನದ ಟೈರ್ಗಳು ಪಂಕ್ಚರ್ ಆಗಿದೆ, ನಾನು ಇನ್ನೊಂದು ವಾಹನದಲ್ಲಿ ಹೊರಟೆ ಎಂದು ಎಐಎಂಐಎಂ ಮುಖ್ಯಸ್ಥರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಈ ಮಧ್ಯೆ, ಎಐಎಂಐಎಂ ಮುಖ್ಯಸ್ಥರ ವಾಹನದ ಮೇಲಿನ ದಾಳಿಯನ್ನು ಉತ್ತರ ಪ್ರದೇಶದ ಸಚಿವ ಮೊಹ್ಸಿನ್ ರಜಾ ಖಂಡಿಸಿದ್ದಾರೆ ಮತ್ತು ಇದು ದುರದೃಷ್ಟಕರ ಘಟನೆಯಾಗಿದ್ದು, ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.
ತಮ್ಮ ಮೇಲೆ ದಾಳಿ ನಡೆಸಿದ ಅಪರಿಚಿತರನ್ನು ಪೊಲೀಸರು ಬಂದಿಸಿದ್ದಾರೆ ಹಾಗೂ ಅವರಿಂದ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
Police have informed me that weapons have been recovered and one shooter has been taken into custody: Asaduddin Owaisi, AIMIM MP, on firing on his convoy while he was returning to Delhi after campaigning in Uttar Pradesh
— ANI (@ANI) February 3, 2022