ಸೂಫಿ ಸಂತ, ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ(82) ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ವೈದಿಕ, ವಚನ ಹಾಗೂ ಸೂಫಿ ಪರಂಪರೆ ಆಶಯಗಳನ್ನು ಇಬ್ರಾಹಿಂ ಸುತಾರ ಅವರು ಭಜನೆ, ಪ್ರವಚನ, ಸಂವಾದಗಳ ಮೂಲಕ ಪ್ರಸ್ತುತಪಡಿಸಿ ಹಿಂದೂ–ಮುಸ್ಲಿಮರ ನಡುವೆ ಭಾವೈಕ್ಯತೆಯನ್ನು ಬೆಳೆಸಿದ್ದರು.
ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ಬಡ ಕುಟುಂಬದಲ್ಲಿ ಇಬ್ರಾಹಿಂ ಸುತಾರ 1940 ರ ಮೇ 10 ರಂದು ಜನಿಸಿದರು. ಇವರ ತಂದೆ ನಬಿಸಾಹೇಬ್ ಮತ್ತು ತಾಯಿ ಅಮೀನಾಬಿ. ಮಹಾಲಿಂಗಪುರದ ಇಬ್ರಾಹಿಂ ಸುತಾರ ಅವರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ.
ನಾಡಿನ ಭಾವೈಕ್ಯತೆಯ ರಾಯಭಾರಿಯಂತಿದ್ದ ಪದ್ಮಶ್ರೀ ಇಬ್ರಾಹಿಂ ಸುತಾರ ಅವರು ಇಂದು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಧರ್ಮ, ಸೂಫಿ ಪರಂಪರೆಗಳ ಪ್ರವಚನಗಳ ಮೂಲಕ ಸಾಮರಸ್ಯಕ್ಕಾಗಿ ಅವರು ಶ್ರಮಿಸಿದ್ದರು. ಅವರಿಗೆ ಸದ್ಗತಿ ಪ್ರಾರ್ಥಿಸುತ್ತಾ, ಅವರ ಕುಟುಂಬ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ. pic.twitter.com/rKSTy2ubig
— B.S.Yediyurappa (Modi Ka Parivar) (@BSYBJP) February 5, 2022
ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್ ಸುತಾರ ಅವರು ಇಂದು ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ.
ಸಮಾಜದಲ್ಲಿ ಸಾಮರಸ್ಯದ ಬೀಜ ಬಿತ್ತಲು ಶ್ರಮಿಸಿದ ಅವರ ದಿವ್ಯಾತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/6t9rEdyyr1
— Basavaraj S Bommai (Modi Ka Parivar) (@BSBommai) February 5, 2022
ಸುತಾರ ಅವರನ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.