ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡಲಾಗುತ್ತದೆ ಎಂದು ಸುದ್ದಿಯೊಂದು ಹರಿದಾಡಿತ್ತು. ಇದು ಸುಳ್ಳು ಸುದ್ದಿ. ಇಂತಹ ಯಾವುದೇ ಯೋಚನೆ ಇಲಾಖೆಯ ಮುಂದೆ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಫೋನ್ ನಿಷೇಧ ಮಾಡ್ತಾರೆ ಅನ್ನೋದು ಸುಳ್ಳು. ಇದೊಂದು ಗಾಳಿ ಸುದ್ದಿ.
ಬೋಧನಾ ವ್ಯವಸ್ಥೆಯು ಆನ್ ಲೈನ್ ರೂಪ ಪಡೆದಿರುವುದರಿಂದ ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಮುಂತಾದ ಆಧುನಿಕ ತಾಂತ್ರಿಕ ಸಾಧನಗಳು ವಿದ್ಯಾರ್ಥಿಗಳ ಕಲಿಕೆಯ ಅವಿಭಾಜ್ಯ ಅಂಗವೇ ಆಗಿಹೋಗಿವೆ. ಹೀಗಿರುವುದಾಗ ನಿಷೇಧದ ಮಾತು ಬರುವುದಿಲ್ಲ. ಇಂತಹ ಗಾಳಿ ಮಾತುಗಳನ್ನು ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ ನಂಬಬಾರದು ಎಂದು ಸಚಿವರು ಹೇಳಿದ್ದಾರೆ.
ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡಲಾಗುತ್ತದೆ. ಯಾರೂ ಕಾಲೇಜಿನ ಆವರಣದಲ್ಲಿ ಮೊಬೈಲ್ ಫೋನ್ ಉಪಯೋಗ ಮಾಡುವಂತಿಲ್ಲ ಎನ್ನುವ ಆದೇಶವನ್ನು ಸರ್ಕಾರ ಜಾರಿಗೆ ತರಲಿದೆ ಎನ್ನುವ ಬಗ್ಗೆ ಕಳೆದ ಎರಡು ದಿನಗಳಿಂದ ಕೇಳಿಬರುತ್ತಿತ್ತು.
https://youtu.be/wNd0tLud9NY