ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಅನಾಮಧೇಯ ಭಕ್ತರೊಬ್ಬರು 60 ಕೆಜಿ ಚಿನ್ನ ದಾನ ಮಾಡಿದ್ದು, ಗರ್ಭಗುಡಿ ಅಲಂಕಾರಕ್ಕೆ ಈಗಾಗಲೇ 37 ಕೆಜಿ ಚಿನ್ನವನ್ನು ಬಳಕೆ ಮಾಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಈ ಕುರಿತು ಮಾಹಿತಿ ನೀಡಿದ ವಿಭಾಗೀಯ ಆಯುಕ್ತ ದೀಪಕ್ ಅಗರವಾಲ್, ಕಾಶಿ ವಿಶ್ವನಾಥ ದೇಗುಲಕ್ಕೆ ಅನಾಮಧೇಯ ದಾನಿಯೊಬ್ಬರಿಂದ 60 ಕೆಜಿ ಚಿನ್ನ ದಾನವಾಗಿ ಬಂದಿದೆ. ಅದರಲ್ಲಿ 37 ಕೆಜಿಯನ್ನು ಗರ್ಭಗುಡಿಯ ಒಳಗೋಡೆಗಳ ಚಿನ್ನದ ಹೊದಿಕೆಗೆ ಬಳಸಲಾಗಿದೆ. ಉಳಿದ 23 ಕೆಜಿ ಚಿನ್ನವನ್ನು ಕಾಶಿ ವಿಶ್ವನಾಥ ದೇವಸ್ಥಾನದ ಮುಖ್ಯ ವಿನ್ಯಾಸದ ಚಿನ್ನದ ಗುಮ್ಮಟದ ಕೆಳಗಿನ ಭಾಗಕ್ಕೆ ಬಳಸಲಾಗುವುದು ಎಂದು ತಿಳಿಸಿದ್ದಾರೆ.
ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿದ ಯಾತ್ರಾರ್ಥಿಗಳು ಬಾಗಿಲಿನ ಹೊರಗಿನಿಂದ ದೇವರನ್ನು ನೋಡುವ ಮೂಲಕ ಪ್ರಾರ್ಥನೆ ಸಲ್ಲಿಸುವಾಗ ಗೋಡೆಗಳ ಮೇಲೆ ಚಿನ್ನದ ಲೇಪನದ ದೃಶ್ಯವನ್ನು ನೋಡಬಹುದಾಗಿದೆ.
Kashi Vishwanath gets a Golden Makeover
Ahead of Maha Shivratri tomorrow, Garbh Grih in Kashi Vishwanath Temple has been decorated with 60 kg gold donated by an anonymous Bhakt from South India
Before this, Maharaja Ranjeet Singh had donated gold for temple’s Shikhar in 1853 pic.twitter.com/I9gK4EUSId
— The Uttar Pradesh Index (@theupindex) February 28, 2022
2021ರ ಡಿಸೆಂಬರ್ ತಿಂಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಧಾಮವನ್ನು ಔಪಚಾರಿಕವಾಗಿ ಉದ್ಘಾಟನೆ ಮಾಡಿದ್ದರು. ಅದಕ್ಕೂ ಮೊದಲೇ ದಾನಿಯು ದೇವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ತಾವು 60 ಕೆಜಿ ಚಿನ್ನವನ್ನು ದೇವಸ್ಥಾನಕ್ಕೆ ದಾನವಾಗಿ ನೀಡುವುದಾಗಿ ಹೇಳಿದ್ದರು. ದೇವಾಲಯದ ಅಧಿಕಾರಿಗಳು ಅವರು ದೇಣಿಗೆ ನೀಡಿದ ಚಿನ್ನವನ್ನು ಗರ್ಭಗುಡಿಯ ಒಳಗೋಡೆಯ ಚಿನ್ನದ ಲೇಪನಕ್ಕಾಗಿ ಮತ್ತು ಮುಖ್ಯ ದೇವಾಲಯದ ಗುಮ್ಮಟದ ಕೆಳಗಿನ ಭಾಗಕ್ಕೆ ಬಳಸುವ ಯೋಜನೆಯನ್ನು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.