ರೈಸ್ ಫುಲ್ಲಿಂಗ್ ವಿಚಾರವಾಗಿ ಫೆಬ್ರವರಿ 7ರಂದು ಕೊಳ್ಳೆಗಾಲದ ಸಲೀಂ ಎಂಬಾತನ ಹತ್ಯೆಯಾಗಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕನ ಪುತ್ರನನ್ನು ಬಂಧಿಸಲಾಗಿದೆ.
40 ವರ್ಷದ ಸಲೀಂನನ್ನು ಕೊಲೆ ಮಾಡಿದ್ದ ಗುಂಪೊಂದು ಆತನನ್ನು ಮಳವಳ್ಳಿಯ ಪಡಂತಹಳ್ಳಿಯ ರಸ್ತೆ ಬದಿ ಎಸೆದು ಹೋಗಿತ್ತು. ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರು ಹುನ್ನಾರ ನಡೆಸಿದ್ದಾರೆ ಎಂಬ ಆಕ್ಷೇಪವೂ ವ್ಯಕ್ತವಾಗಿತ್ತು.
ಮಳವಳ್ಳಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ರಾಜೇಶ್ ಹಾಗೂ ತಂಡ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಸೂಕ್ಷ್ಮವಾಗಿ ತನಿಖೆ ನಡೆಸಿದ ತಂಡ ಇದೀಗ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಪುತ್ರ ಶ್ರೀಕಾಂತ್ ನನ್ನು ಬಂಧಿಸಿದ್ದಾರೆ.
ಸಲೀಂನನ್ನು ಕೊಲೆ ಮಾಡಿದ್ದ ತಂಡದ ಎಡವಟ್ಟಿನಿಂದ ಪ್ರಕರಣ ಬಯಲಿಗೆ ಬಂದಿದೆ. ಕೊಲೆ ಮಾಡಿದ್ದ ಶವವನ್ನು ಬೆಳಕವಾಡಿ ಠಾಣೆ ವ್ಯಾಪ್ತಿ ಬದಲಿಗೆ ಮಳವಳ್ಳಿ ಗ್ರಾಮಾಂತರ ಪರದಿಯಲ್ಲಿ ಶವವನ್ನು ಬಿಸಾಕಿದ್ದರಿಂದ ಪ್ರಕರಣ ಬಯಲಿಗೆ ಬಂದಿದೆ ಎಂದು ತಿಳಿದುಬಂದಿದೆ.