ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ ಒಟ್ಟು ಮತದಾರರು 2,32,836. ಇವರಲ್ಲಿ ಪುರುಷ ಮತದಾರರ ಸಂಖ್ಯೆ 1,12,271, ಮಹಿಳಾ ಮತದಾರರ ಸಂಖ್ಯೆ 1,20,557 ಸಾವಿರ. ಅಂದರೆ ಚನ್ನಪಟ್ಟಣದಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆಯೇ 8 ಸಾವಿರದಷ್ಟು ಹೆಚ್ಚಿದೆ.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿರುವ ಒಟ್ಟು ಮತದಾರರು 2,36,790. ಇವರಲ್ಲಿ ಪುರುಷ ಮತದಾರರು 1,21,067, ಮಹಿಳಾ ಮತದಾರರು 1,15,717.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿರುವ ಒಟ್ಟು ಮತದಾರರು 2,36,790. ಇವರಲ್ಲಿ ಪುರುಷ ಮತದಾರರು 1,21,067, ಮಹಿಳಾ ಮತದಾರರು 1,15,717.
ಮಾಜಿ ಮುಖ್ಯಮಂತ್ರಿಗಳ ಮಕ್ಕಳ ಭವಿಷ್ಯ ನಿರ್ಧಾರ:
ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ನಿಂದ ಸ್ಪರ್ಧಿಸಿದ್ರೆ, ಶಿಗ್ಗಾಂವಿಯಲ್ಲಿ ಮಾಜಿ ಮುಖ್ಯಮಂತ್ರಿ, ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.
ಮೊದಲೆರಡು ಚುನಾವಣೆಗಳಲ್ಲಿ ಸೋಲು ಕಂಡಿರುವ ನಿಖಿಲ್ಗೆ ಇದು ಮೂರನೇ ಚುನಾವಣೆ, ಭರತ್ ಬೊಮ್ಮಾಯಿಗೆ ಇದು ಮೊದಲನೇ ಚುನಾವಣೆ. ಇಬ್ಬರೂ ತಮ್ಮ-ತಮ್ಮ ತಂದೆ ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಕಣದಲ್ಲಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಿ ಪಿ ಯೋಗೇಶ್ವರ್ ತಮ್ಮ ರಾಜಕೀಯ ಜೀವನದ ನಿರ್ಣಾಯಕ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಎದುರಿಸ್ತಿದ್ದಾರೆ.
ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರು ಕಣದಲ್ಲಿದ್ದಾರೆ. ಇವರಿಗೂ ಇದು ಮೊದಲನೇ ಚುನಾವಣೆ.
ಸಂಡೂರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಿನಿಮಾ ಲೋಕದ ನಂಟಿರುವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಆಪ್ತ ಬಂಗಾರು ಹನುಮಂತು ಸ್ಪರ್ಧೆ ಮಾಡಿದ್ದಾರೆ.
ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೂಸುಫ್ ಪಠಾಣ್ ಕಣದಲ್ಲಿದ್ದಾರೆ.
ಮೂರು ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಮೂರು ಕುಟುಂಬಗಳ ಮೂವರು ಸ್ಪರ್ಧೆಯಲ್ಲಿದ್ದಾರೆ. ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗೆ 3 ಪಕ್ಷಗಳು ಕಣಕ್ಕಿಳಿಸಿರುವ ಅಭ್ಯರ್ಥಿಗಳ ಕುಟುಂಬಸ್ಥರು ಸಂಸದರಾಗಿ ಆಯ್ಕೆ ಆಗಿ ರಾಜೀನಾಮೆ ಕೊಟ್ಟಿದ್ದೇ ಕಾರಣ.