ಮಂಗಳೂರಿನ ತಣ್ಣೀರು ಬಾವಿಯ ಟ್ರೀ ಪಾರ್ಕ್ ನಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ ಸಮಾರಂಭದಲ್ಲಿ ಕ್ರೀಡಾ ಸಾಧನೆಗಾಗಿ ಕುಮಾರಿ ಸಿಂಚನಾ ಜೈನ್ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಚಲನಚಿತ್ರ ನಟ ನವೀನ್ ಪಡೀಲ್ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ. ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ವೈ. ದಿನೇಶ್ ಕುಮಾರ್, ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೈ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ಆರಿಫ್ ಪಡುಬಿದ್ರಿ, ಪಿ .ಬಿ. ಹರೀಶ್ ರೈ, ಐ. ಬಿ. ಸಂದೀಪ್ ಕುಮಾರ್ ಮತ್ತಿತರರಿದ್ದರು.