ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಅನುಭವಿಸಿದೆ. ಆಡಳಿತದಲ್ಲಿದ್ದ ಪಂಜಾಬ್ ರಾಜ್ಯದಲ್ಲಿಯೂ ಹೀನಾಯ ಸೋಲು ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಸಂಸ್ದ ಶಶಿ ತರೂರ್ ಕಾಂಗ್ರೆಸ್ ಗೆಲ್ಲಲು ನಾಯಕತ್ವದಲ್ಲಿನ ಬದಲಾವಣೆ ಅನಿವಾರ್ಯ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಂಬಿದ ಎಲ್ಲರಿಗೂ, ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸುತ್ತಿರುವುದು ಬೇಸರವಾಗಿದೆ. ಭಾರತದ ಅಭಿವೃದ್ದಿಗೆ ಕಾಂಗ್ರೆಸ್ ಧನಾತ್ಮಕ ಕಾರ್ಯಸೂಚಿಯನ್ನು ಜಾರಿಗೊಳಿಸುವ ಸಮಯ ಮತ್ತು ಜನರಿಗೆ ಸ್ಫೂರ್ತಿ ನೀಡುವ ರೀತಿಯಲ್ಲಿ ಕಾಂಗ್ರೆಸ್ ನಾಯಕತ್ವವನ್ನು ಸುಧಾರಿಸಬೇಕಿದೆ ಎಂದು ಹೇಳಿದ್ದಾರೆ.
ಅಲ್ಲದೇ, ಒಂದು ವಿಷಯ ಸ್ಪಷ್ಟವಾಗಿದೆ – ನಾವು ಯಶಸ್ವಿಯಾಗಬೇಕಾದರೆ ಬದಲಾವಣೆ ಅನಿವಾರ್ಯ ಎಂದು ಶಶಿ ತರೂರ್ ಹೇಳಿದ್ದಾರೆ.
2/2 And to reform our organisational leadership in a manner that will reignite those ideas and inspire the people.
One thing is clear – Change is unavoidable if we need to succeed.
— Shashi Tharoor (@ShashiTharoor) March 10, 2022
ಕಾಂಗ್ರೆಸ್ ನಾಯಕತ್ವದ ಬಗ್ಗೆ ಈಗಾಗಲೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಜಿ-೨೩ ನಾಯಕರು ಪ್ರಶ್ನಿಸಿದ್ದರು. ಈ ಬಗ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೂ ಬಹಿರಂಗ ಪತ್ರ ಬರೆದು ಕಾಂಗ್ರೆಸ್ ನಾಯಕತ್ವದ ಬದಲಾವಣೆ ಅನಿವಾರ್ಯ ಎಂದು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದರು. ಅಲ್ಲದೇ, ಕಾಂಗ್ರೆಸ್ನ ಹಲವು ಹಿರಿಯ ರಾಜಕಾರಣಿಗಳು ಈ ಬಗ್ಗೆ ಪ್ರಶ್ನಿಸುತ್ತಲೇ ಬರುತ್ತಿದ್ದಾರೆ. ಇದೀಗ, ಶಶಿ ತರೂರ್ ಅವರು ಕಾಂಗ್ರೆಸ್ ನಾಯಕತ್ವ ಬದಲಾವಣೆ ಅನಿವಾರ್ಯ ಎನ್ನುವ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ.