ಗೊಮ್ಮಟೇಶ್ವರ ಮೂರ್ತಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ದಿ ಇಂಡಿಯನ್ ನ್ಯೂ ನ್ಯಾಷನಲ್ ಪಾರ್ಟಿ ಅಧ್ಯಕ್ಷ ‘ಅಯೂಬ್ ಖಾನ್’ ಅವರನ್ನು ಮೈಸೂರು ನಗರದ ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಯೂಬ್ ಖಾನ್ ವಿರುದ್ಧ ದಿಗಂಬರ ಜೈನ ಸಮಾಜ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರಿಗೆ ದೂರು ನೀಡಿತ್ತು. ಗೊಮ್ಮಟೇಶ್ವರ ಮೂರ್ತಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಯೂಬ್ ಖಾನ್ ವಿರುದ್ಧ 295 ಎ ಅಡಿ ಪ್ರಕರಣ ದಾಖಲಿಸಿದ್ದರೆ. ಸುದ್ದಿ ಪ್ರಸಾರ ಮಾಡಿದ ಖಾಸಗಿ ವಾಹಿನಿ ಮುಖ್ಯಸ್ಥ ವಿರುದ್ಧ 505,(2) ಅಡಿ ಪ್ರಕರಣ ದಾಖಲಿಸಿದ್ದಾರೆ. ಬಂಧನದ ಬಳಿಕ ಅಯೂಬ್ ನನ್ನು ಮೈಸೂರಿನ 2ನೇ ಜೆಎಂಎಫ್ಸಿ ಕೋರ್ಟ್ ಜಡ್ಜ್ ಮುಂದೆ ಹಾಜರುಪಡಿಸಿದ್ದು, ಫೆಬ್ರವರಿ 25ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.
ನಿಮಗೇನಾದರೂ ಈ ದೇಶದ ಮೇಲೆ ಅನುಕಂಪ ಇದ್ದರೆ ಮೊದಲು ಅಶ್ಲೀಲವಾಗಿ ನಿಂತಿರತಕ್ಕಂತ ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.