ಬೆಂಗಳೂರು: ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಶುಕ್ರವಾರದಂದು(28 ರಂದು) ಚುನಾವಣೆ ನಡೆಯಲಿದ್ದು ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ರಜೆ ಘೋಷಿಸಿ ಸರ್ಕಾರ ಆದೇಶಸಿದೆ.
ಅವಧಿ ಮುಕ್ತಾಯವಾಗಲಿರುವ ಹಾಗೂ ವಿವಿಧ ಕಾರಣಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಖಾಲಿಯಾಗಿರುವ ಹಾಗೂ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಗ್ರಾಮ ಪಂಚಾಯ್ತಿಗಳ ಅವಧಿ ಪೂರ್ಣಗೊಂಡಿರುವ 252 ಗ್ರಾಮ ಪಂಚಾಯ್ತಿಗಳು ಹಾಗೂ 187 ತೆರವಾದ ಗ್ರಾಮ ಪಂಚಾಯ್ತಿಗಳ ವಾರ್ಡಗಳಿಗೆ ಉಪ ಚುನಾವಣೆ ನಡೆಯಲಿದೆ.
ಪಂಚಾಯಿತಿ ಮತ ಕ್ಷೇತ್ರಗಳಲ್ಲಿನ ಸರಕಾರಿ ಹಾಗೂ ಖಾಸಗಿ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ ಹಾಗೂ ರಾಜ್ಯ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆ, ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಮತದಾರ ನೌಕರರಿಗೆ ಸೀಮಿತವಾದಂತೆ ಅ.೨೮ ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಸರಕಾರ ಆದೇಶಿಸಿದೆ.