ಜಾತ್ರೆಯಲ್ಲಿ ಜಾನುವಾರುಗಳನ್ನು ಖರೀದಿಸಿ ಕೊಂಡೊಯ್ಯುತ್ತಿದ್ದ ರೈತರ ಮೇಲೆ ಕೆಲವರು ಪೊಲೀಸ್ ನೈತಿಕೆ ಗಿರಿಯನ್ನು ಮೆರೆದಿದ್ದಾರೆ. ಇದನ್ನು ಸಂಸದ ಪ್ರಜ್ವಲ್ ರೇವಣ್ಣ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನುವಾರ ರಾತ್ರಿ ಗಂಡಸಿ ಹೋಬಳಿಯ ಜಾನುವಾರು ಜಾತ್ರೆಯಲ್ಲಿ ಎತ್ತುಗಳನ್ನು ಖರೀದಿಸಿಕೊಂಡು ಹೋಗುತ್ತಿದ್ದ ರೈತರನ್ನು ಹಾಸನ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕದಬಳ್ಳಿ ಬಳಿ ಮಂಗಳೂರಿಗೆ ತೆರಳುತ್ತಿದ್ದ ದೆಹಲಿ ಮೂಲದ ಜನರು ಕಸಾಯಿ ಖಾನೆಗೆ ಸಾಗಿಸುತ್ತಿದ್ದಾರೆಂದು ಕೆಲವರು ಗಲಾಟೆ ಮಾಡಿ ಎತ್ತುಗಳಿದ್ದ ವಾಹನ ತಡೆದಿದ್ದರು.
ಸ್ಥಳಕ್ಕೆ ಬಂದ ಪೊಲೀಸರಿಗೆ ರೈತರು ವಾಸ್ತವ ಮನವರಿಕೆ ಮಾಡಿಕೊಟ್ಟರೂ ಸಹ ಎತ್ತು ಹಾಗೂ ವಾಹನ ಬಿಡದಿದ್ದಾಗ ಪೊಲೀಸರ ವಿರುದ್ಧ ಆಕ್ರೋಶಗೊಂಡ ರೈತರು ಪ್ರತಿಭಟನೆಗೆ ಮುಂದಾದರು. ಇದನ್ನು ಅರಿತ ಸಂಸದ ಪ್ರಜ್ವಲ್ ರೇವಣ್ಣ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರಿಗೆ ಮನವರಿಕೆ ಮಾಡಿಕೊಟ್ಟು ರೈತರ ಜಾನುವಾರುಗಳನ್ನು ಬಿಡಿಸಿದ್ದಾರೆ.
ಜಾನುವಾರು ಕಳ್ಳಸಾಗಾಣಿಕೆ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು. ನೈತಿಕ ಪೊಲೀಸ್ಗಿರಿ ಮಾಡುವುದು ಸರಿಯಲ್ಲ, ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿಯಾಗುತ್ತಿದೆ, ಇದಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳದಲ್ಲಿದ್ದ ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದೆ. 3/3
— Prajwal Revanna (@iPrajwalRevanna) February 23, 2022
ಈ ಬಗ್ಗೆ ಆಕ್ರೊಶ ವ್ಯಕ್ತಪಡಿಸಿರುವ ಸಂಸದ ಪ್ರಜ್ವಲ್ ರೇವಣ್ಣ, ಜಾನುವಾರು ಕಳ್ಳಸಾಗಾಣಿಕೆ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು. ನೈತಿಕ ಪೊಲೀಸ್ಗಿರಿ ಮಾಡುವುದು ಸರಿಯಲ್ಲ, ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿಯಾಗುತ್ತಿದೆ, ಇದಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳದಲ್ಲಿದ್ದ ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅವರು ಮನವಿ ಮಾಡಿದ್ದಾರೆ.