ಎಪ್ರಿಲ್/ಮೇ ತಿಂಗಳಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪರಿಷ್ಕರಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ. ಪರೀಕ್ಷೆ ಎಂದಿನಂತೆ ಏ.16 ರಿಂದ ಮೇ.6 ರವರೆಗೆ ನಡೆಯಲಿದೆ. ಏ.21ರಂದು ನಡೆಯಬೇಕಿದ್ದ ಭಾಷಾ ವಿಷಯಗಳಲ್ಲಿ ಉರ್ದು ಮತ್ತು ಅರೇಬಿಕ್ ವಿಷಯಗಳನ್ನು ಪ್ರತ್ಯೇಕಿಸಿ ಪರೀಕ್ಷೆ ನಡೆಸಲಾಗುತ್ತಿದೆ.
ಇದರ ಪ್ರಕಾರವಾಗಿ ಏ.21 ರಂದು ಉರ್ದು ಪರೀಕ್ಷೆ ಎಂದಿಂತೆ ನಡೆಯಲಿದ್ದು, ಈ ಮೊದಲು ರಜೆ ಅವಧಿಯಾಗಿದ್ದ ಏ.29ಕ್ಕೆ ಅರೆಬಿಕ್ ಪರೀಕ್ಷೆ ನಡೆಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಪರೀಷ್ಕೃತ ವೇಳಾಪಟ್ಟಿ…
ಏಪ್ರಿಲ್ 16: ಗಣಿತ, ಶಿಕ್ಷಣ, ಬೇಸಿಕ್ ಗಣಿತ
ಏಪ್ರಿಲ್ 18: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏಪ್ರಿಲ್ 19: ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ ನೆಸ್
ಏಪ್ರಿಲ್ 20: ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 21: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 22: ಲಾಜಿಕ್, ಬಿಸಿನೆಸ್ ಸ್ಟಡೀಸ್
ಏಪ್ರಿಲ್ 23: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನೋವಿಜ್ಞಾನ, ರಸಾಯನಶಾಸ್ತ್ರ
ಏಪ್ರಿಲ್ 25: ಅರ್ಥಶಾಸ್ತ್ರ
ಏಪ್ರಿಲ್ 26: ಹಿಂದಿ
ಏಪ್ರಿಲ್ 28: ಕನ್ನಡ
ಏಪ್ರಿಲ್ 29: ಅರೇಬಿಕ್
ಏಪ್ರಿಲ್ 30: ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 2: ಭೂಗೋಳ, ಜೀವಶಾಸ್ತ್ರ
ಮೇ 4: ಇಂಗ್ಲಿಷ್
ಮೇ 6: ಲೆಕ್ಕ ಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಕನ್ನಡ (ಐಚ್ಛಿಕ)