ಧರ್ಮಸ್ಥಳ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತರಾಗಿ ಇತ್ತೀಚೆಗೆ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಹೆಗ್ಗಡೆಯವರು ರಿಷಬ್ ಶೆಟ್ಟಿ ದಂಪತಿಯನ್ನು ಗೌರವಿಸಿ ಅಭಿನಂದಿಸಿದರು. ನಟ ಪ್ರಮೋದ್ ಶೆಟ್ಟಿ ಕೂಡಾ ಉಪಸ್ಥಿತರಿದ್ದರು.
ಹಾಡಿನ ವಿವಾದದ ಬಗ್ಗೆ ಮಾತನಾಡಿದ ಅವರು ಇದು ಚಲನಚಿತ್ರ ಜನಪ್ರಿಯವಾದಾಗ ಸಾಮಾನ್ಯವಾಗಿದೆ. ಅದಕ್ಕೆ ಉತ್ತರ ಕೊಡುವ ಕಾರ್ಯವನ್ನು ಸಂಗೀತ ನಿರ್ದೇಶಕರು ಮಾಡಲಿದ್ದಾರೆ ಎಂದು ಹೇಳಿದರು. ಸಿನಿಮಾ ತಯಾರಿ ಮೊದಲೇ ಧರ್ಮಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿ, ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದೆ. ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ. ಹೆಗ್ಗಡೆಯವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮಗೆ ದೇವರೇ ಸಿನಿಮಾ ನೋಡಿ ಆಶೀರ್ವದಿಸಿದಂತಾಗಿದೆ ಎಂದು ಹೇಳಿದರು.
ಪತ್ನಿ ಪ್ರಗತಿ ಶೆಟ್ಟಿ ಮಾತನಾಡಿ ಇನ್ನು ಎರಡು ತಿಂಗಳು ತೀರ್ಥಯಾತ್ರೆ ಮಾಡುವ ಕಾರ್ಯಕ್ರಮವಿದ್ದು ಬಳಿಕ ಕೊಂಚ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದರು.