ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವವು ನವೆಂಬರ್ 19ರಿಂದ 24ರ ವರೆಗೆ ನಡೆಯಲಿದೆ. ಭಕ್ತರ ಅನುಕೂಲಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳಕ್ಕೆ ಕಲ್ಪಿಸುವ ರಸ್ತೆಗಳನ್ನು ಸರಿಪಡಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಪತ್ರದ ಮುಖೇನ ಮನವಿಯನ್ನು ಮಾಡಿದ್ದರು. ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ರೂ 1 ಕೋಟಿಯನ್ನು ಮಂಜೂರು ಮಾಡಿದ್ದಾರೆ.
ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 73 ಗುರುವಾಯನಕೆರೆಯಿಂದ ಉಜಿರೆ ತನಕದ ರಸ್ತೆ ಹಾಗೂ ಕೇಂದ್ರ ಸರ್ಕಾರದಿಂದ ಸ್ಪರ್ ರಸ್ತೆಯಾಗಿ ಘೋಷಣೆಯಾಗಿರುವ ಪೆರಿಯಶಾಂತಿಯಿಂದ ಧರ್ಮಸ್ಥಳ ವರೆಗಿನ ರಸ್ತೆ ತೀರ ಹದಗೆಟ್ಟಿದ್ದು ಇದರಲ್ಲಿ ವಾಹನ ಸಂಚಾರ ಕಷ್ಟವಾಗಿದೆ
ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವವು ನವೆಂಬರ್ 19ರಿಂದ 24ರ ವರೆಗೆ ನಡೆಯಲಿದೆ. ಭಕ್ತರ ಅನುಕೂಲಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳಕ್ಕೆ ಕಲ್ಪಿಸುವ ರಸ್ತೆಗಳನ್ನು ಸರಿಪಡಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಪತ್ರದ ಮುಖೇನ ಮನವಿಯನ್ನು ಮಾಡಿದ್ದರು. ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ರೂ 1 ಕೋಟಿಯನ್ನು ಮಂಜೂರು ಮಾಡಿದ್ದಾರೆ.