ಆ ದಿನಗಳು ಖ್ಯಾತಿಯ ನಟ ಹಾಗೂ ಸಾಮಾಜಿಕ ಹೋರಾಟಗಾರ ನಟ ಚೇತನ್ರನ್ನು ಬಂಧಿಸಲಾಗಿದೆ.
ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾರೆಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂನ ಪೊಲೀಸರು ಚೇತನ್ರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬೆನ್ನಲ್ಲೇ ಫೇಸ್ಬುಕ್ ಲೈವ್ ಬಂದಿರುವ ಚೇತನ್ ಪತ್ನಿ ಮೇಘಾ ಅವರು, ಪೊಲೀಸರು ಚೇತನ್ರನ್ನು ಬಂಧಿಸಿದ್ದಾರೆ. ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿತ್ತು. ಆದರೆ, ಅವರು ಅಲ್ಲಿ ಇಲ್ಲ. ಇದು ಒಂದು ರೀತಿ ಕಿಡ್ನಾಪ್ ರೀತಿಯಲ್ಲಿ ಇದೆ. ಪೊಲೀಸರು ಚೇತನ್ ಬಗ್ಗೆ ಮಾಹಿತಿ ನೀಡುತ್ತಿಲ್ಲ ಎಂದು ಪೊಲೀಸರ ವಿರುದ್ದ ಆರೋಪಿಸಿದ್ದಾರೆ.
ನ್ಯಾಯಮೂರ್ತಿ ಕೃಷ್ಣಾ ದೀಕ್ಷಿತ್ ಅವರ ಮೇಲೆ ಆಕ್ಷೇಪಾರ್ಹ ಪೋಸ್ಟ್ ಪ್ರಕಡಿಸಿದ ಹಿನ್ನೆಲೆಯಲ್ಲಿ ಚೇತನ್ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.