ಕ್ರೇಜಿಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಅವರು ಇಂದು (ಫೆ.28) ನಿಧನರಾಗಿದ್ದಾರೆ.8
83 ವರ್ಷದ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿ ಆಗದೇ ಪಟ್ಟಮ್ಮಾಳ್ ವೀರಸ್ವಾಮಿ ಅವರು ಕೊನೆಯುಸಿರು ಎಳೆದಿದ್ದಾರೆ.
ಇವರ ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.
ಪಟ್ಟಮ್ಮಾಳ್ ವೀರಸ್ವಾಮಿ ಅವರನ್ನು ಫೆ.28ರ ಮುಂಜಾನೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 6.30ರ ಸುಮಾರಿಗೆ ಅವರು ನಿಧನ ಹೊಂದಿದ್ದಾರೆ. ಬೆಳಗ್ಗೆ 10.30ಕ್ಕೆ ಪಾರ್ಥಿವ ಶರೀರವನ್ನು ರಾಜಾಜಿನಗರದ ನಿವಾಸಕ್ಕೆ ತರಲಾಗುತ್ತದೆ. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಇಂದು ಸಂಜೆಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ರವಿಚಂದ್ರನ್ ಕುಟುಂಬದವರು ತಿಳಿಸಿದ್ದಾರೆ.