ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಲಕ್ಷ್ಮೀ (26), ರಾಜ್ (12), ಕೋಮಲ್ (7), ಕುನಾಲ್ (4), ಗೋವಿಂದ (8) ಅವರನ್ನು ಕೊಲೆಯಾದವರು ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು 5 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಈ ಭೀಕರ ಕೃತ್ಯಕ್ಕೆ ಕೆಆರ್ಎಸ್ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕೆಆರ್ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.