ಬೆಂಗಳೂರು: 67 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನದಲ್ಲಿ ಸುದ್ಧಿ ಗೋಷ್ಠಿ ನಡೆಸಿದ ಅವರು, ನಾಳೆ ನಾಡಿನಾದ್ಯಂತ ಗ್ರಾಮಗಳಲ್ಲಿ, ನಗರಗಳಲ್ಲಿ, ಶಾಲೆ ಹಾಗೂ ಇತರ ಸಂಘ ಸಂಸ್ಥೆಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ರಾಜ್ಯೋತ್ಸವ ಆಚರಿಸಬೇಕು ಹಾಗೂ ಕನ್ನಡದ ಧ್ವಜಗಳನ್ನು ಹಾರಿಸಬೇಕು ಎಂದು ಕರೆ ನೀಡಿದರು.
ನಾಳೆ ಸಂಜೆ 4.00 ಗಂಟೆಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಹಮ್ಮಿಕೊಳ್ಳಲಾಗಿದೆ. ದಿವಂಗತ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ಸರ್ಕಾರ ಕೊಡಮಾಡುತ್ತಿದ್ದು, ಅಭಿಮಾನಿ ಕನ್ನಡಿಗರು ಭಾಗವಹಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದರು.