ಬೆಂಗಳೂರು: ಪೊಲೀಸ್ ಕಾನ್ಸ್ ಸ್ಟೆಬಲ್ ಹುದ್ದೆ ಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳ ಮಾಡುವಂತೆ ಆಕಾಂಕ್ಷಿಗಳು ಸರಕಾರಕ್ಕೆ ಒತ್ತಾಯಿಸುತ್ತಿದ್ದರು. ಅಕಾಂಕ್ಷಿಗಳು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಬಳಿ ವಯೋಮಿತಿ ಹೆಚ್ಚಿಸುವಂತೆ ಮನವಿ ಮಾಡಿಕೊಂಡಿದ್ದರು. ಪ್ರತಿಕ್ರಿಯಿಸಿದ್ದ ಸಚಿವರು ಚರ್ಚೆ ಮಾಡುವುದಾಗಿ ತಿಳಿಸಿದ್ದರು, ಇದೀಗ 2 ವರ್ಷ ವಯೋಮಿತಿಯನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ.
ಉದ್ಯೋಗಾಕಾಂಕ್ಷಿಗಳ ಬಹು ದಿನಗಳ ಬೇಡಿಕೆಯಾಗಿದ್ದ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ.@CMofKarnataka@DgpKarnataka pic.twitter.com/5X3JudW44K
— Araga Jnanendra( ಮೋದಿ ಅವರ ಕುಟುಂಬ) (@JnanendraAraga) November 3, 2022
ಗೃಹ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್ಸಿ/ಎಸ್ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32 ವರ್ಷಗಳಿಗೆ ಹೆಚ್ಚಿಸಲಾಗಿದೆ. ಸೇವಾ ನಿರತ ಅಭ್ಯರ್ಥಿಗಳ ವಯೋಮಿತಿಯಲ್ಲಿ ಎಸ್ಸಿ/ ಎಸ್ಟಿ ಅಭ್ಯರ್ಥಿಗಳ ವಯಸ್ಸಿಗೆ 35 ಜಾಗೂ ಇತರೆ ಅಭ್ಯರ್ಥಿಗಳಿಗೆ 33 ವರ್ಷಗಳಿಗೆ ಹೆಚ್ಚಿಸಲಾಗಿದೆ.
ಸಶಸ್ತ್ರ ಪಡೆಯ ಪೊಲೀಶ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 31 ವರ್ಷ ಹಾಗೂ ಎಸ್ಸಿ/ಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 33 ವರ್ಷಗಳನ್ನು ನಿಗಧಿ ಪಡಿಸಲಾಗಿದೆ.
ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ. ಉದ್ಯೋಗಾಕಾಂಕ್ಷಿಗಳ ಬಹು ದಿನಗಳ ಬೇಡಿಕೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.