ಫೆಬ್ರವರಿ 27ರಂದು ಮೇಕೆದಾಟು ಪಾದಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.
ಪಾದಯಾತ್ರೆ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಮೇಕೆದಾಟು ಪಾದಯಾತ್ರೆ ಪುನರಾರಂಭಗೊಳ್ಳುತ್ತಿದೆ. ಫೆಬ್ರವರಿ 27ಕ್ಕೆ ಪಾದಯಾತ್ರೆ ಆರಂಭಿಸಲು ತೀರ್ಮಾನಿಸಲಾಗಿದೆ. ಈಗ ರಾಮನಗರದಿಂದ ಬೆಂಗಳೂರಿನವರೆಗೂ ಉಳಿದ 6 ದಿನಗಳ ಪಾದಯಾತ್ರೆ ನಡೆಯಲಿದೆ ಎಂದು ಹೇಳಿದೆ.
ಮೇಕೆದಾಟು ಪಾದಯಾತ್ರೆ ಪುನರಾರಂಭಗೊಳ್ಳುತ್ತಿದೆ, ಫೆಬ್ರವರಿ 27ಕ್ಕೆ ಪಾದಯಾತ್ರೆ ಆರಂಭಿಸಲು ತೀರ್ಮಾನಿಸಲಾಗಿದೆ, ಈಗ ರಾಮನಗರದಿಂದ ಬೆಂಗಳೂರಿನವರೆಗೂ ಉಳಿದ 6 ದಿನಗಳ ಪಾದಯಾತ್ರೆ ನಡೆಯಲಿದೆ.@DKShivakumar pic.twitter.com/gSk53D9E8q
— Karnataka Congress (@INCKarnataka) February 18, 2022
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಜನವರಿ 9 ರಂದು ಪಾದಯಾತ್ರೆ ಆರಂಭಿಸಿತ್ತು. ಈ ಪಾದಯಾತ್ರೆ ರಾಮನಗರದ ಮಾರ್ಗವಾಗಿ ಬೆಂಗಳೂರಿಗೆ ತಲುಪಬೇಕಿತ್ತು. ಆದರೆ, ಆ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದ ಮೇರೆಗೆ ಸರ್ಕಾರ ಪಾದಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದೀಗ ಕಾಂಗ್ರೆಸ್ ಪಾದಯಾತ್ರೆಯನ್ನು ಮತ್ತೆ ಮುಂದುವರಿಸಲು ತೀರ್ಮಾನಿಸಿದೆ.