ದೆಹಲಿ ಕ್ಯಾಪಿಟಲ್ಸ್ ತಂಡದ ಬಸ್ ಮೇಲೆ ದಾಳಿ ಮಾಡಿದ ಆರೋಪದ ಮೇಲೆ ದುಷ್ಕರ್ಮಿಗಳ ವಿರುದ್ಧ ಎಫ್ಐಆರ್ ದಾಖಲಿಸಿರುವುದಾಗಿ ಮುಂಬೈ ಪೊಲೀಸರು ಬುಧವಾರ ತಿಳಿಸಿದ್ದಾರೆ.
ಐಪಿಎಲ್ ಸೀಸನ್ 15 ಮಾರ್ಚ್ 26 ರಿಂದ ಆರಂಭವಾಗಲಿದೆ. ಎಲ್ಲಾ ತಂಡಗಳ ಸಿದ್ಧತೆಗಳು ಭರದಿಂದ ಸಾಗಿವೆ. ಈ ಬಾರಿ ಎಲ್ಲಾ ಪಂದ್ಯಗಳು ಮುಂಬೈ ಮತ್ತು ಪುಣೆಯಲ್ಲಿ ನಡೆಯಲಿವೆ. ಮುಂಬೈನ ಮೂರು ಸ್ಟೇಡಿಯಂಗಳಾದ ವಾಂಖೆಡೆ, ಬ್ರಾಬನ್ ಮತ್ತು ಡಿವೈ ಪಾಟೀಲ್ ನಲ್ಲಿ ಪಂದ್ಯಗಳು ನಡೆಯಲಿವೆ. ಇದಕ್ಕಾಗಿ ಎಲ್ಲಾ ತಂಡಗಳ ಆಟಗಾರರು ಮುಂಬೈ ಕಡೆ ಪ್ರಯಾಣಿಸುತ್ತಿದ್ದಾರೆ. ಇದೆಲ್ಲದರ ನಡುವೆ ಆಟಗಾರರ ಭದ್ರತೆಯಲ್ಲಿ ಭಾರೀ ಲೋಪ ಕಂಡುಬಂದಿದೆ.
Mumbai | An FIR has been registered against 5-6 unknown persons under sections 143,147,149,427 of IPC for allegedly attacking the Delhi Capital IPL team parked bus, police said pic.twitter.com/aED8Z1Hd5G
— ANI (@ANI) March 16, 2022
ಮಾರ್ಚ್ 16 ರಂದು, ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಆಟಗಾರರನ್ನು ಕರೆತರಲು 5-ಸ್ಟಾರ್ ಹೋಟೆಲ್ನ ಹೊರಗೆ ನಿಲ್ಲಿಸಿದ್ದ ಐಷಾರಾಮಿ ಬಸ್ನ ಗಾಜುಗಳನ್ನು ಒಡೆದು ದುಷ್ಕೃತ್ಯ ಮೆರೆದಿದ್ದಾರೆ. ಈ ಸಂಬಂಧ ಐವರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ದೆಹಲಿ ಕ್ಯಾಪಿಟಲ್ ಐಪಿಎಲ್ ತಂಡದ ನಿಂತಿದ್ದ ಬಸ್ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಐಪಿಸಿಯ 143, 147, 149, 427 ಸೆಕ್ಷನ್ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮುಂಬೈನ ಕೊಲಾಬಾ ಪ್ರದೇಶದಲ್ಲಿರುವ ತಾಜ್ ಪ್ಯಾಲೇಸ್ ಎಂಬ ಹೋಟೆಲ್ನಲ್ಲಿ ದೆಹಲಿ ತಂಡ ತಂಗಿದೆ.
https://youtu.be/7R_IfHf4X3A