ಭಾರತ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್ ಜೂಲನ್ ಗೋಸ್ವಾಮಿ ಅವರು ವಿಶ್ವಕಪ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ.
ಮಹಿಳಾ ಏಕದಿನ ವಿಶ್ವಕಪ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಜೂಲನ್ ಗೋಸ್ವಾಮಿ ಒಂದು ವಿಕೆಟ್ ಪಡೆಯುವ ಮೂಲಕ ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
🚨 RECORD ALERT 🚨
Wicket No. 4⃣0⃣ in the WODI World Cups for @JhulanG10! 🔝 🙌
What a champion cricketer she has been for #TeamIndia ! 👏 👏 #CWC22 | #WIvIND
Follow the match ▶️ https://t.co/ZOIa3L288d pic.twitter.com/VIfnD8CnVR
— BCCI Women (@BCCIWomen) March 12, 2022
ವಿಶ್ವಕಪ್ನಲ್ಲಿ ಗೋಸ್ವಾಮಿ ಈವರೆಗೆ 40 ವಿಕೆಟ್ಗಳನ್ನು ಪಡೆಯುವ ಮೂಲಕ 39 ವಿಕೆಟ್ ಪಡೆದಿದ್ದ ಆಸ್ಟ್ರೇಲಿಯಾದ ಸ್ಪಿನ್ನರ್ ಲಿನ್ ಫುಲ್ಸ್ಟನ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಸೆಡನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವೆಸ್ಟ್ ಇಂಡೀಸ್ ವಿರುದ್ಧ ಭಾರತ 155 ರನ್ ಅಂತರದಿಂದ ಗೆಲುವು ಸಾಧಿಸಿತು.