ತನ್ನ ನೆಚ್ಚಿನ ನಾಯಕ ಪ್ರಭಾಸ್ ನಟನೆಯ ‘ರಾಧೆ ಶ್ಯಾಮ್’ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಮೂಡಿಬಂದಿಲ್ಲ ಎಂದು ಮನನೊಂದ ಅಭಿಮಾನಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕರ್ನೂಲಿನ ತಿಲಕನಗರದಲ್ಲಿ ಈ ಘಟನೆ ನಡೆದಿದೆ. ಮೃತನನ್ನು 24 ವರ್ಷದ ರವಿತೇಜ ಎನ್ನಲಾಗಿದ್ದು, ಘಟನೆಯಿಂದ ಪೋಷಕರು, ಕುಟುಂಬಸ್ಥರು, ಕಣ್ಣೀರಿಡುತ್ತಿದ್ದಾರೆ.
ರೆಬೆಲ್ ಸ್ಟಾರ್ ‘ಪ್ರಭಾಸ್’ ಅಭಿನಯದ ಲೇಟೆಸ್ಟ್ ಸಿನಿಮಾ ರಾಧೆಶ್ಯಾಮ್ ಇತ್ತೀಚೆಗಷ್ಟೇ ತೆರೆ ಕಂಡಿದೆ. ಯುವಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರ ಮಾರ್ಚ್ 11 ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಿನಿಮಾ ಚೆನ್ನಾಗಿಲ್ಲ ಎಂದು ಬೇಸರಗೊಂಡ ರವಿತೇಜ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಯಿಗೆ ಹೇಳಿಯೇ ರವಿತೇಜ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಾರ್ಹ. ಈ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.