ಪಂಚರಾಜ್ಯ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವದ ಬಗ್ಗೆ ಪ್ರಶ್ನೆಗಳೆದ್ದಿವೆ. ಈ ಬೆನ್ನಲ್ಲೇ, ಹಲವು ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಬೆಂಬಲಿಸಿ ಟ್ವೀಟ್ ಮಾಡುತ್ತಿದ್ದಾರೆ. ರಾಹುಲ್ ಗಾಂಧಿಯವರು ಕಾಂಗ್ರೆಸ್ನ ಪೂರ್ನಕಾಲಿಕ ಅಧ್ಯಕ್ಷರಾಗಬೇಕು ಎಂದು ರಾಜ್ಯದ ಮಾಜಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಹುಲ್ ಗಾಂಧಿಯವರು ಶ್ರೀಘ್ರವೇ ಪೂರ್ಣಕಾಲಿಕ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಬೇಕು. ಇದು ನನ್ನಂತೆಯೇ ಲಕ್ಷಾಂತರ ಕಾರ್ಯಕರ್ತರ ಆಶಯವಾಗಿದೆ. ಕೋಮುವಾದಿಗಳ ವಿರುದ್ಧದ ಹೋರಾಟದಲ್ಲಿ ನಾವು ನಿಮ್ಮೊಂದಿಗೆ ಇರಲಿದ್ದೇವೆ.
ಶ್ರೀಮತಿ ಸೋನಿಯಾ ಗಾಂಧೀಜಿ, ಶ್ರೀ ರಾಹುಲ್ ಗಾಂಧಿ ಅವರು ಮತ್ತು ಶ್ರೀಮತಿ ಪ್ರಿಯಾಂಕಾ ಗಾಂಧೀಜಿ ಅವರು ನಮಗೆ ಮಾರ್ಗದರ್ಶನ ನೀಡಬೇಕೆಂದು ನಾನು ವಿನಂತಿಸುತ್ತೇನೆ. ನಿಮ್ಮ ಸಮರ್ಥ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಭವಿಷ್ಯದ ಯಾವುದೇ ಸವಾಲುಗಳನ್ನು ಜಯಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
Smt Sonia Gandhi is the glue that binds us all together. Her leadership is paramount. I request Smt.Sonia Gandhiji, Sri.Rahul Gandhi avaru and Smt.Priyanka Gandhiji to guide us. I am sure that under their able leadership, @INCIndia will be able to overcome any future challenges.
— Dr. G Parameshwara (@DrParameshwara) March 15, 2022
ಆ ಮೂಲಕ ಜಿ.ಪರಮೇಶ್ವರ್ ಅವರು ರಾಹುಲ್ ಗಾಂಧಿಯವರು ಮತ್ತೊಮ್ಮೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಹಿರಿಯ ನಾಯಕ ಎಂಬಿ ಪಾಟೀಲ್ ಅವರು ಸಹಿತ ರಾಹುಲ್ ಗಾಂಧಿಯವರು ಪಕ್ಷದ ರಾಷ್ಟ್ರಾಧ್ಯಕ್ಷರಾಗಬೇಕು ಎಂದು ಆಗ್ರಹಿಸಿದ್ದಾರೆ.
The results of five states are based on those regions alone. We are still the second-largest party in the country and preferred by our people for our substantial work. 2/2
— M B Patil (@MBPatil) March 15, 2022
ಪಂಚ ರಾಜ್ಯ ಚುನಾವಣೆಯ ಬೆನ್ನಲ್ಲೇ, ಕಾಂಗ್ರೆಸ್ನಲ್ಲಿದ್ದ ಒಳಬೇಗುದಿಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ. ಈಗಾಗಲೇ ಹಲವಾರು ಕಾಂಗ್ರೆಸ್ ನಾಯಕರು ಕಾಂಗ್ರೆಸ್ ನಾಯಕತ್ವದಲ್ಲಿ ಬದಲಾವಣೆ ಆಗಬೇಕೆಂದು ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಕೆಲ ವರ್ಷಗಳ ಹಿಂದೆ ಜಿ-23 ನಾಯಕರು ನಾಯಕತ್ವದ ಬಗ್ಗೆ ಪ್ರಶ್ನಿಸಿ ಸೋನಿಯಾಗಾಂಧಿಯವರಿಗೆ ಬಹಿರಂಗ ಪತ್ರ ಬರೆದಿದ್ದರು.