ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಆಟಗಾರರು ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸೇರಿದ್ದ ಲತಾ ಮಂಗೇಶ್ಕರ್ ಇಂದು ನಿಧನರಾಗಿದ್ದಾರೆ. ಭಾರತದ ಗಾನ ಕೋಗಿಲೆಗೆ ಸಂತಾಪ ಸೂಚಿಸುವ ನಿಟ್ಟಿನಿಟ್ಟಿ ಪಂದ್ಯ ಆರಂಭಕ್ಕೂ ಮೊದಲು ಎಲ್ಲಾ ಆಟಗಾರರು ಮೈದಾನದಲ್ಲಿ ಮೌನಾಚರಣೆ ಮಾಡಿದ್ದಾರೆ. ಬಳಿಕ ಟೀಂ ಇಂಡಿಯಾ ಆಟಗಾರರೆಲ್ಲ ಕೈಗೆ ಕಪ್ಪುಪಟ್ಟಿ ಧರಿಸಿ ಮೈದಾನಕ್ಕಿಳಿದರು.
ಭಾರತ ಪ್ರವಾಸ ಕೈಗೊಂಡಿರುವ ವೆಸ್ಟ್ ಇಂಡೀಸ್, ಮೂರು ಪಂದ್ಯಗಳ ಏಕದಿನ ಸರಣಿ ಮತ್ತು 3 ಪಂದ್ಯಗಳ ಟಿ20 ಸರಣಿ ಆಡಳಿದೆ. ಇಂದು ಏಕದಿನ ಸರಣಿಯ ಮೊದಲ ಪಂದ್ಯ ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ.