ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳು ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಭಣಗೊಳಿಸಿರುವ ಬಿಜೆಪಿ ಸರ್ಕಾರ ಈಗ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಹಿಜಾಬ್-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ರಜೆ ಘೋಷಿಸಿ ಆನ್ ಲೈನ್ ತರಗತಿಗಳನ್ನು ಶುರು ಮಾಡಬೇಕೆಂದು ರಾಜ್ಯದ ಮುಖ್ಯಮಂತ್ರಿಯನ್ನು ಆಗ್ರಹಪಡಿಸುತ್ತಿದ್ದೇನೆ.
ಹಿಜಾಬ್-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ
ಶಾಲಾ ಕಾಲೇಜುಗಳಿಗೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ
ತಕ್ಷಣ ರಜೆ ಘೋಷಿಸಿ ಆನ್ ಲೈನ್ ತರಗತಿಗಳನ್ನು ಶುರು ಮಾಡಬೇಕೆಂದು @CMofKarnataka ಅವರನ್ನು ಆಗ್ರಹಪಡಿಸುತ್ತಿದ್ದೇನೆ.#ಶಿಕ್ಷಣಹಕ್ಕು
1/6— Siddaramaiah (@siddaramaiah) February 8, 2022
ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳು ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಭಣಗೊಳಿಸಿರುವ ಬಿಜೆಪಿ ಸರ್ಕಾರ ಈಗ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ.
ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳು ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ.#ಶಿಕ್ಷಣಹಕ್ಕು
2/6— Siddaramaiah (@siddaramaiah) February 8, 2022
ಹಿಜಾಬ್ ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ. ಈಗಲಾದರೂ ಮುಖ್ಯಮಂತ್ರಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.