ನಗರದ ಟಿ.ದಾಸರಹಳ್ಳಿಯ ಸೌಂದರ್ಯ ಶಾಲೆಯಲ್ಲಿ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿ ರಮ್ಯಾ ಮೂರ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಹಿಂದೆ ಶಾಲಾ ಆಡಳಿತ ಮಂಡಳಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ವಿದ್ಯಾರ್ಥಿನಿ ತಾಯಿ ದೂರು ನೀಡಿದ್ದರು. ಇದೇ ವಿಚಾರವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಸಂಬಂಧ ಬೆಂಗಳೂರು ನಗರದ ಯಶವಂತಪುರ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐ ಹೆಟ್ ಯು ಪ್ರಿನ್ಸಿಪಲ್ ಎಂದು ಹೆಸರು ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆ ಗುರುವಾರ ಫೆ.18 ಶೆಟ್ಟಿಹಳ್ಳಿ ಬಳಿ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ರಮ್ಯಮೂರ್ತಿ ಸಾವಿಗೆ ಶರಣಾಗಿದ್ದಾಳೆ.