ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಇದೇ ಶುಕ್ರವಾರ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಅದಕ್ಕೂ ಮುನ್ನ ವಿಶ್ವದ ಕೆಲವು ಕಡೆ ವಿಕ್ರಾಂತ್ ರೋಣ ಸ್ಪೆಷಲ್ ಶೋ ಅನ್ನು ಆಯೋಜನೆ ಮಾಡಿದೆ ಚಿತ್ರತಂಡ. ದೇಶದ ರಾಜಧಾನಿ ನವ ದೆಹಲಿಯಲ್ಲಿ ಸಂಸದರಿಗೆ ಮತ್ತು ಸರಕಾರಿ ಅಧಿಕಾರಿಗಳಿಗೆ ಸ್ಪೆಷಲ್ ಶೋ ಆಯೋಜನೆ ಮಾಡಿದ್ದು, ಈ ಕುರಿತು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟ್ವಿಟ್ ಮಾಡಿದ್ದಾರೆ. ಸಿನಿಮಾ ನೋಡುವುದಕ್ಕಾಗಿ ಕುತೂಹಲದಿಂದ ಕಾಯುತ್ತಿರುವುದಾಗಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ವಿಕ್ರಾಂತ್ ಕ್ರಾಂತ್ ರೋಣ ಸಿನಿಮಾ ವಿಶ್ವದಾದ್ಯಂತ 27ದೇಶಗಳಲ್ಲಿ ಪ್ರಿವ್ಯೂ ಆಗುತ್ತಿದೆ. ಹಾಗೆ ಇಂದು ದುಬೈನಲ್ಲಿ 5 ಭಾಷೆಯಲ್ಲೂ ಪ್ರದರ್ಶನವಾಗಲಿದೆ. ಪ್ರಪಂಚದಾದ್ಯಂತ 3200ರಿಂದ 3500 ಚಿತ್ರಮಂದಿಗಳಲ್ಲಿ ವಿಕ್ರಾಂತ್ ರೋಣ ರಿಲೀಸಾಗುತ್ತಿದ್ದು, ಕರ್ನಾಟಕದಲ್ಲೇ 400ರಿಂದ 420 ಥೀಯೆಟರ್ಗಳಲ್ಲಿ ಬಿಡುಗಡೆಯಾಗುತ್ತಿದೆ.
ವಿಕ್ರಾಂತ್ ರೋಣ ಸಿನಿಮಾ ಕರ್ನಾಟಕಕ್ಕಿಂತ ತೆಲುಗುನ ಥೀಯೆಟರ್ಗಳಲ್ಲಿ ಹೆಚ್ಚು ಸಂಖ್ಯೆಗಳಲ್ಲಿ ರಿಲೀಸ್ ಆಗುವ ಸಾಧ್ಯತೆಯಿದೆ ಎಂದು ನಿರ್ಮಾಪಕ ಜಾಕ್ ಮಂಜು ತಿಳಿಸಿದ್ದಾರೆ. ಈಗಾಗಲೇ ಅಡ್ವಾನ್ಸ್ ಬುಕ್ಕಿಂಗ್ನಲ್ಲಿ ಗುಡ್ ರೆಸ್ಪಾಂಸ್ ಸಿಕ್ಕಿದ್ದು, ಈಗಾಗಲೇ ಅಲವಾರು ಶೋಗಳ ಟಿಕೇಟ್ ಫುಲ್ ಆಗಿದೆ, ಉತ್ತರ ಭಾರತದಲ್ಲಿ 900, ಆಂಧ್ರದಲ್ಲಿ 350ಕ್ಕೂ ಹೆಚ್ಚು ಥಿಯೇಟರ್ ವಿದೇಶಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್ಗಳಲ್ಲಿ ವಿಕ್ರಾಂತ್ರೋಣ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಾಳೆ ಫ್ಯಾನ್ಸ್ ಶೋ ಗಳನ್ನು ಆಳವಡಿಸಿದ್ದು ಮುಂಜಾನೆ 6 ಗಂಟೆಗೆ ಎಲ್ಲಾ ಚಿತ್ರ ಮಂದಿರಗಳಲ್ಲಿ ವಿಕ್ರಾಂತ್ ರೋಣನ ಜಾತ್ರೆ ಶುರುವಾಗಲಿದೆ.