ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಮ್ಮ ಸಂಪುಟ ಮತ್ತು ಪಕ್ಷದ ಮೇಲೆ ನಿಯಂತ್ರಣವಿಲ್ಲ. ಸರ್ಕಾರವನ್ನೇ ಸಂಘ ಪರಿವಾರಕ್ಕೆ ಅಡವಿಟ್ಟಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬೊಮ್ಮಾಯಿ ತಮ್ಮ ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸರ್ಕಾರವನ್ನು ಸಂಘ ಪರಿವಾರಕ್ಕೆ ಹೊರ ಗುತ್ತಿಗೆಗೆ ನೀಡಿದ್ದಾರೆ. ಅಲ್ಲಿರುವ ಕೆಲವು ಪುಂಡರ ಕೈಗೆ ಅಧಿಕಾರ ನೀಡಿರುವಂತೆ ಕಾಣುತ್ತಿದೆ. ಸರ್ಕಾರವನ್ನು ಸಂಘ ಪರಿವಾರಕ್ಕೆ ಅಡವಿಟ್ಟರೆ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಬೊಮ್ಮಾಯಿ ಕನಸು ಕಾಣುತ್ತಿದ್ದಾರೆ. ಈ ಪುಂಡಾಟಿಕೆ ಅವರ ಕುರ್ಚಿಯನ್ನೂ ಕಿತ್ತುಕೊಳ್ಳಲಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಇನ್ನೂ ಅಧಿಕಾರದಲ್ಲಿದ್ದರೆ, ಧಾರವಾಡದ ಮುಸ್ಲಿಂ ವರ್ತಕರ ಮೇಲೆ ದೌರ್ಜನ್ಯ ಎಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು. ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಬೇಕು ಎಂದು ಆಗ್ರಹಿಸಿದರು.
ಭಾರತೀಯ ಜನತಾ ಪಕ್ಷ ಹೇಳಿಕೊಂಡು ಬರುತ್ತಿರುವ ‘ರಾಮ ರಾಜ್ಯ’ದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ?
2/10#ArrestSanghiGoons pic.twitter.com/LyPOe7oR8t— Siddaramaiah (@siddaramaiah) April 10, 2022
ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ. ಮುಖ್ಯಮಂತ್ರಿ ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ಪ್ರತಿಪಾದಿಸುವ ರಾಮ ರಾಜ್ಯದ ಒಂದು ಚಿತ್ರವನ್ನು ರಾಮನವಮಿ ಸಮಯದಲ್ಲೇ ಶ್ರೀರಾಮ ಸೇನೆಯ ಗೂಂಡಾಗಳು ಧಾರವಾಡದಲ್ಲಿ ಜಗತ್ತಿನ ಎದುರು ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ? ಧಾರವಾಡದಲ್ಲಿ ಕೇವಲ ಮುಸ್ಲಿಂ ವ್ಯಾಪಾರಿ ಮೇಲೆ ದಾಳಿಯಾಗಿಲ್ಲ. ಅದು ಕಲ್ಲಂಗಡಿ ಬೆಳೆಯುವ ರೈತರ ಮೇಲಿನ ದಾಳಿಯೂ ಹೌದು. ಹೀಗೆಯೇ ಬಿಟ್ಟರೆ ಇವರು ಎಲ್ಲರ ಮನೆ ಬಾಗಿಲನ್ನೂ ತಟ್ಟುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ.
ಮುಖ್ಯಮಂತ್ರಿ @BSBommai ಅವರು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ.
10/10#ArrestSanghiGoons— Siddaramaiah (@siddaramaiah) April 10, 2022