ಹಿಜಾಬ್ ಹಾಗೂ ಕೇಸರಿ ಶಾಲು ಇದೀಗ ವಿಜಯಪುರಕ್ಕೂ ಕಾಲಿಟ್ಟಿದೆ. ಜಿಲ್ಲೆಯ ಇಂಡಿ ತಾಲೂಕಿನ 2 ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.
ಆ ಹಿನ್ನೆಲೆಯಲ್ಲಿ, ಇಂದು ಸಭೆ ನಡೆಸಿದ ಆಡಳಿತ ಮಂಡಳಿಗಳು, ನಾಳೆ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಸರ್ಕಾರದ ನಿಗದಿ ಪಡಿಸಿದಂತೆ ಸಮವಸ್ತ್ರ ಧರಿಸಿ ಬರಬೇಕು ಎಂದು ತಾಕೀತು ಮಾಡಿ, ಇಂದು ಒಂದು ದಿನದ ಮಟ್ಟಿಗೆ ಎರಡು ಕಾಲೇಜುಗಳು ರಜೆ ಘೋಷಣೆ ಮಾಡಿವೆ.
ಇಂಡಿ ಪಟ್ಟಣದ ಶಾಂತೇಶ್ವರ ಪಿಯು ಕಾಲೇಜು ಹಾಗೂ ಜಿ.ಆರ್.ಬಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಆಗಮಿಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ತಕ್ಷಣವೇ, ಸಭೆ ಸೇರಿದ ಆಡಳಿತ ಮಂಡಳಿ ಇಂದು ಸೋಮವಾರ ಎರಡೂ ಕಾಲೇಜುಗಳಿಗೆ ರಜೆ ಘೊಷಣೆ ಮಾಡಿವೆ.