ಕಲಬುರಗಿ: ದೇಶದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಇದೀಗ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣವೊಂದು ಕಲಬುರಗಿಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನೇ ಕೃತ್ಯ ಎಸಗಿರುವುದಾಗಿ ಬಯಲಾಗಿದೆ. ಅಲ್ಲದೇ ಪ್ರಕರಣ ಸಂಬಂಧ ಆರೋಪಿ ಅಣ್ಣನನ್ನು ಕೂಡ ಆಳಂದ ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿ ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದಳು. ಶಾಲೆಗೆ ರಜೆ ಇದ್ದಾಗೆಲ್ಲ ಆಕೆ ಮನೆಗೆ ಬರುತ್ತಿದ್ದಳು. ಹೀಗೆ ಬಂದಾಗ ಸಹೋದರ ಆಕೆಯನ್ನು ಬಳಸಿಕೊಳ್ಳುತ್ತಿದ್ದನು. ರಾತ್ರಿ ಹೊತ್ತು ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆತ ತಂಗಿ ಎನ್ನುವುದನ್ನೂ ನೋಡದೇ ರೇಪ್ ಮಾಡುತ್ತಿದ್ದ. ಹೀಗೆ ಕಳೆದ ಮಾರ್ಚ್ ನಿಂದ ವಿದ್ಯಾರ್ಥಿನಿ ಹಲವು ಬಾರಿ ತನ್ನ ಅಣ್ಣನಿಂದ ಅತ್ಯಾಚಾರಕ್ಕೆ ಒಳಗಾಗಿದ್ದಳು. ಅಲ್ಲದೇ ಈ ವಿಚಾರವನ್ನು ಬಾಯಿಬಿಟ್ಟರೆ ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದನು. ಹೀಗಾಗಿ ಆಕೆ ಅತ್ಯಾಚಾರ ವಿಚಾರವನ್ನು ಮುಚ್ಚಿಟ್ಟಿದ್ದಳು.