ಸೆಪ್ಟೆಂಬರ್ 12ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ (Assembly Session) ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ವಿಧಾನಸೌಧದಲ್ಲಿ 10 ದಿನಗಳ ಕಾಲ ಅಧಿವೇಶನ (Assembly Session) ನಡೆಯಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಸರ್ಕಾರ ವಿರುದ್ಧ ಗುತ್ತಿಗೆದಾರರ ಸಂಘ ಕಮಿಷನ್ ಆರೋಪ ಮಾಡಿದ ನಂತರ ವಿಧಾನಮಂಡಲ ಅಧಿವೇಶನ ಕರೆಯಬೇಕೆಂದು ವಿಪಕ್ಷ ಕಾಂಗ್ರೆಸ್ ತೀವ್ರ ಒತ್ತಾಯಿಸಿತ್ತು.
ಇದನ್ನೂ ಓದಿ : ಪಶ್ಚಿಮ ಬಂಗಾಳ : ವಿಧಾನಸಭೆಯಲ್ಲಿ ಹೊಡೆದಾಡಿಕೊಂಡ ಶಾಸಕರು
ಈ ಬಾರಿಯ ಅಧಿವೇಶನದಲ್ಲಿ ಸರ್ಕಾರದ ಮೇಲಿನ ಕಮಿಷನ್ ಆರೋಪ, ಕರಾವಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಧರ್ಮ ದಂಗಲ್, ಮಳೆ, ಪ್ರವಾಹ ವಿಪತ್ತು ಪರಿಹಾರ ಕುರಿತು ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ತೀವ್ರ ಚರ್ಚೆ, ಕೋಲಾಹಲ ನಡೆಯುವ ಸಾಧ್ಯತೆಯಿದೆ.