ರಾಜ್ಯದಲ್ಲಿ ಮತ್ತೆ ಕೊರೊನಾರ್ಭಟ ಶುರುವಾಗ್ತಿದೆ. ಇಂದು ಒಂದೇ ದಿನದಲ್ಲಿ 125 ಜನರಿಗೆ ಕೊರೊನಾ ಸೋಂಕು ದೃಢಪಟ್ಟು, 3 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರು, ದಕ್ಷಿಣ ಕನ್ನಡ, ಹಾಸನದಲ್ಲಿ ತಲಾ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇನ್ನು ಬೆಂಗಳೂರಿನಲ್ಲಿಯೇ ಇಂದು 94 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ 436 ಕೊರೊನಾ ಸಕ್ರಿಯ ಪ್ರಕರಣಗಳು ವರದಿಯಾದಂತಾಗಿದೆ.
ರಾಜ್ಯದಲ್ಲಿಂದು ಒಟ್ಟು 125 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ತಲಾ 5 ಮಂದಿ, ಮೈಸೂರಿನಲ್ಲಿ 13, ಶಿವಮೊಗ್ಗದಲ್ಲಿ 2, ವಿಜಯಪುರದಲ್ಲಿ 2 ಮಂದಿ, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ ಅಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.