ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಶಂಭುಗನಹಳ್ಳಿ ಗ್ರಾಮದಲ್ಲಿ ದುಷ್ಕರ್ಮಿಗಳು 170 ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ.
ರೈತ ಸಂತೋಷ್ ಎಂಬುವವರ ಜಮೀನಿನಲ್ಲಿದ್ದ 170 ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ. ಜೊತೆಗೆ ಜಮೀನಿನಲ್ಲಿದ್ದ ತಂತಿ ಬೇಲಿಯನ್ನು ನಾಶ ಮಾಡಿದ್ದಾರೆ. ಅಡಿಕೆ ಗಿಡಗಳನ್ನು ಕಡಿದು ಹಾಕಿರುವುದನ್ನು ಕಂಡು ರೈತ ಸಂತೋಷ್ ಕಣ್ಣೀರಿಡುತ್ತಿದ್ದಾರೆ.
ಬೇಲೂರು ತಾಲೂನಲ್ಲಿ ಪದೇ ಪದೇ ಇಂತಹ ಪ್ರಕರಣಗಳು ಮರುಕಳಿಸುತ್ತಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದ್ದಾರೆ. ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.