ಮುಸ್ಲಿಂ ಮಹಿಳೆಯರ ಕುರಿತಾಗಿನ ಅವಹೇಳನಕಾರಿ ಮತ್ತು ವಿವಾದಾತ್ಮರಕ ಹೇಳಿಕೆ ಕುರಿತಾಗಿ ಕಲ್ಲಡ್ಲ ಪ್ರಭಾಕರ್ ಭಟ್ ವಿರುದ್ಧ ಮತ್ತೆರಡು ಎಫ್ ಐಆರ್ ದಾಖಲಾಗಿದೆ.
ಬೆಂಗಳೂರಿನ ಡಿ.ಜೆ ಹಳ್ಳಿ ಠಾಣೆಯಲ್ಲಿ ರಹೀಬ್ ಉಲ್ಲಾ ಮತ್ತು ಶೇಷಾದ್ರಿಪುರಂ ನಲ್ಲಿ ಉಸ್ಮಾನ್ ಎಂಬುವರು ಪ್ರತ್ಯೇಕ ದೂರುಗಳ ಆಧಾರದ ಮೇಲೆ ಎನ್ ಸಿಆರ್ ದಾಖಲಿಸಲಾಗಿದೆ.
ಡಿ. 24ರಂದು ಮಂಡ್ಯ ಜಿಲ್ಲೆಯ ಶ್ರೀಗಂಗಪಟ್ಟಣದಲ್ಲಿ ಮಾತನಾಡುತ್ತಿದ್ದ ಪ್ರಭಾಕರ್ ಭಟ್, ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಂದು ಗಂಡ, ಪರ್ಮನೆಂಟ್ ಗಂಡನೇ ಇರಲಿಲ್ಲ. ತ್ರಿವಳಿ ತಲಾಕ್ ನಿಷೇಧಿಸುವ ಮೂಲಕ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಶ್ರೀರಂಗ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಲ್ಲಡ್ಕ ಪ್ರಭಾಕರ್ ಭಟ್, ಈಗಾಗಲೇ ಹೈ ಕೋರ್ಟ್ ನಿಂದ ತಡೆಯಾಜ್ಞೆ ಪಡೆದಿದ್ದಾರೆ.