ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಐವರು ಅಧ್ಯಕ್ಷರನ್ನು ನೇಮಿಸಲಾಗಿದೆ.
ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಡಿ.ಕೆ.ಮೋಹನ್ ಬಾಬು, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹನುಮಂತರಾಯಪ್ಪ, ಬೆಂಗಳೂರು ಉತ್ತರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾಗಿ ಅಬ್ದುಲ್ ವಾಜೀದ್, ಬೆಂಗಳೂರು ದಕ್ಷಿಣ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾಗಿ ಒ.ಮಂಜುನಾಥ್, ಬೆಂಗಳೂರು ಕೇಂದ್ರ ಸಮಿತಿ ಜಿಲ್ಲಾಧ್ಯಕ್ಷರಾಗಿ ಕೆ.ನಂದಕುಮಾರ್ ಅವರನ್ನು ನೇಮಿಸಲಾಗಿದೆ.
ಕೋಲಾರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಕೆ ವಿ ಗೌತಮ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಕೆ ವಿ ಗೌತಮ್ ಅವರು ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದರು.
ಹೊಸದಾಗಿ ರಚಿಸಲಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ ಮಹತ್ವ ಪಡೆದಿದೆ.


