ಬಿಗ್‌ಬಾಸ್‌ಗೆ ಹಾಕಿದ್ದ ಬೀಗ ತೆಗೆಯಿರಿ – ಮಧ್ಯರಾತ್ರಿ ಡಿ ಕೆ ಶಿವಕುಮಾರ್‌ ಆದೇಶ

ಬಿಗ್‌ಬಾಸ್‌ ರಿಯಾಲಿಟಿ ಶೋ ನಡೆಯುವ ಜಾಲಿವುಡ್‌ಗೆ ಹಾಕಲಾಗಿದ್ದ ಬೀಗವನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.

ಈ ಬಗ್ಗೆ ಸ್ವತಃ ಡಿ.ಕೆ.ಶಿವಕುಮಾರ್‌ ಅವರೇ ಮಾಹಿತಿ ನೀಡಿದ್ದಾರೆ.

ಬಿಗ್‌ಬಾಸ್‌ ಕನ್ನಡ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್‌ಗೆ ಹಾಕಲಾಗಿರುವ ಬೀಗವನ್ನು ತೆಗೆಯುವಂತೆ ನಾನು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಪರಿಸರ ನಿಯಮಗಳ ಪಾಲನೆ ನಮ್ಮ ಅತ್ಯಾದ್ಯತೆಯಾಗಿದ್ದರೂ ಮಾಡಲಾಗಿರುವ ಉಲ್ಲಂಘನೆಗಳ ಬಗ್ಗೆ ಕ್ರಮಕೈಗೊಳ್ಳುವುದಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಡಿಯಲ್ಲಿರುವ ನಿಯಮಗಳ ಪ್ರಕಾರ ಸ್ಟುಡಿಯೋಗೆ ಕಾಲಾವಕಾಶ ನೀಡಬೇಕು.

ಪರಿಸರ ಸಂರಕ್ಷಣೆಯತ್ತ ನಮ್ಮ ಜವಾಬ್ದಾರಿಗೆ ಬದ್ಧನಾಗಿ ನಾನು ಕನ್ನಡ ಮನರಂಜನಾ ಇಂಡಸ್ಟ್ರಿಗೆ ಬೆಂಬಲಿಸಲು ಬದ್ಧನಾಗಿದ್ದೇನೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆಗಿರುವ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿರುವ ಲೆಕ್ಸಿಂಗ್‌ ಟನ್‌...

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....