ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸುವುದಕ್ಕೆ ಸಿದ್ಧತೆ ಚುರುಕುಗೊಂಡಿದೆ. ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಸೂಚಿಸಿದೆ.
ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕರ್ನಾಟಕ ಪಂಚಾಯತ್‌ರಾಜ್ ಇಲಾಖೆಯ ಆಯುಕ್ತರು ಪತ್ರವನ್ನು ಬರೆದಿದ್ದಾರೆ.
2025-26ನೇ ಸಾಲಿಗೆ ರಾಜ್ಯದ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಅಕ್ಟೋಬರ್ ೨೪ರೊಳಗೆ ಅಂದರೆ 15 ದಿನದೊಳಗೆ ಸಲ್ಲಿಸುವಂತೆ ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಸಿಇಒಗಳಿಗೆ ಸೂಚಿಸಿದ್ದಾರೆ.


