ವಕೀಲರಾಗಿ 7 ವರ್ಷ ಅನುಭವವುಳ್ಳ ನ್ಯಾಯಾಧಿಕಾರಿಗಳು ವಕೀಲರ ಸಂಘದ ಕೋಟಾದಡಿ ನೇರ ನೇಮಕಾತಿಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಅಥವಾ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ, ನ್ಯಾಯಮೂರ್ತಿ ಎಂ ಎಂ ಸುದರೇಶ್, ನ್ಯಾಯಮೂರ್ತಿ ಅರವಿಂದ ಕುಮಾರ್, ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಅವರಿದ್ದ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಈ ತೀರ್ಪು ನೀಡಿದೆ.
ಭವಿಷ್ಯದಲ್ಲಿ ನಡೆಯುವ ಜಿಲ್ಲಾ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಗಳಿಗೆ ಈ ತೀರ್ಪು ಅನ್ವಯವಾಗುತ್ತದೆ ಎಂದು ಹೇಳಿರುವ ಸುಪ್ರೀಂಕೋರ್ಟ್, ಹೈಕೋರ್ಟ್‌ಗಳ ಜೊತೆ ಸಮಾಲೋಚನೆ ನಡೆಸಿ ಜಿಲ್ಲಾ ನ್ಯಾಯಾಧೀಶರು ಅಥವಾ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ವಕೀಲರ ಸಂಘದ ಕೋಟಾದಡಿ ನೇರ ನೇಮಕಾತಿ ಮಾಡಿಕೊಳ್ಳುವ ಸಂಬಂಧ ನಿಯಮಗಳನ್ನು ರೂಪಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ


